ವಿಟ್ಲ : ವಿಟ್ಠಲ ಎಜುಕೇಶನ್ ಸೊಸೈಟಿ ಯ ಪ್ರೌಢಶಾಲೆಯ 2022-23 ನೇ ಸಾಲಿನ ಹತ್ತನೇ ತರಗತಿಯ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭದಲ್ಲಿ ಸಂಸ್ಥೆಯ ಉಚಿತ ಶಿಕ್ಷಣ ‘ಯೋಜನೆಯ ವಿದ್ಯಾ ಪೋಷಕ ಸಮಿತಿ’ ಗೆ 10 ನೇ ತರಗತಿಯ ವಿದ್ಯಾರ್ಥಿಗಳು 92,300 ರೂ. ನೀಡಿದರು.
ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಸಂಸ್ಥೆಯ ಸದಸ್ಯ ಪದ್ಮಯ್ಯ ಗೌಡ ರವರು ಆ ಮೊತ್ತವನ್ನು ಒಂದು ಲಕ್ಷ ರೂಪಾಯಿಗೆ ಭರ್ತಿ ಮಾಡಿ ಸಂಸ್ಥೆಗೆ ನೀಡುವುದಾಗಿ ಹೇಳಿದರು.
ಸಂಸ್ಥೆಯ ಅಧ್ಯಕ್ಷ ಮುಗುಳಿ ತಿರುಮಲೇಶ್ವರ ಭಟ್, ಕೋಶಾಧಿಕಾರಿ ಬಾಬು ಕೊಪ್ಪಳ, ಸದಸ್ಯ ಸದಾಶಿವ ಬನ, ಮುಖ್ಯ ಶಿಕ್ಷಕ ಕಿರಣ್ ಕುಮಾರ್ ಬ್ರಹ್ಮಾವರ, ಸಹಶಿಕ್ಷಕರು ಮತ್ತು ಮಕ್ಕಳು ಉಪಸ್ಥಿತರಿದ್ದರು.


























