ಸುಳ್ಯ: ಪ್ರವೀಣ್ ನೆಟ್ಟಾರು ಅವರ ಸ್ಮರಣಾರ್ಥವಾಗಿ ಸವಣೂರು ಅಂಕತ್ತಡ್ಕ ಎಂಬಲ್ಲಿ ನಿರ್ಮಾಣಗೊಂಡ ವೀರ ಸಾವರ್ಕರ್ ವೃತ್ತದ ಲೋಕಾರ್ಪಣೆಯನ್ನು ಬಿಜೆಪಿಯ ರಾಜ್ಯಾಧ್ಯಕ್ಷ, ದ.ಕ. ಲೋಕಸಭಾ ಸದಸ್ಯರಾದ ನಳಿನ್ ಕುಮಾರ್ ಕಟೀಲು ಹಾಗೂ ಬಂದರು, ಮೀನುಗಾರಿಕೆ ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ ರವರು ನೆರವೇರಿಸಿದರು.

ಈ ಸಂದರ್ಭದಲ್ಲಿ ಸವಣೂರು ಗ್ರಾ.ಪಂ.ಅಧ್ಯಕ್ಷೆ ರಾಜೀವಿ ರೈ, ಬಿಜೆಪಿ ಸುಳ್ಯ ಮಂಡಲ ಅಧ್ಯಕ್ಷ ಹರೀಶ್ ಕಂಜಿಪಿಲಿ, ಪುತ್ತೂರು ಎ.ಪಿ.ಎಂ.ಸಿ. ಮಾಜಿ ಅಧ್ಯಕ್ಷ ದಿನೇಶ್ ಮೆದು, ಕಾಣಿಯೂರು ಗ್ರಾ.ಪಂ.ಉಪಾಧ್ಯಕ್ಷ ಗಣೇಶ್ ಉದನಡ್ಕ, ಪ್ರಮುಖರಾದ ಇಂದಿರಾ ಬಿ.ಕೆ.,ಜಗದೀಶ್ ಅಧಿಕಾರಿ ಸೇರಿದಂತೆ, ಪ್ರಮುಖರು ಹಾಗೂ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.




























