ಬಂಟ್ವಾಳ: ಬಾಗಲಕೋಟೆ ನಿವಾಸಿ ಬಿಸಿರೋಡ್ ಕೆ.ಎಸ್.ಆರ್.ಟಿ.ಸಿ.ಬಸ್ ಡಿಪೋ ನಿರ್ವಾಹಕ ದವಾಳ್ ಸಾಬ್ ಎಂಬಾತನನ್ನು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿ ಬಂಟ್ವಾಳ ಪೊಲೀಸರು ಬಂಧಿಸಿದ್ದಾರೆ.
ಕಲ್ಲಡ್ಕ ಶಾಲೆಯೊಂದರ ವಿದ್ಯಾರ್ಥಿನಿಯಾಗಿದ್ದು, ಇಂದು ಮಧ್ಯಾಹ್ನದ ವೇಳೆ ಶಾಲೆಯಿಂದ ಮನೆಗೆ ಕಲ್ಲಡ್ಕದಿಂದ ಬಿಸಿರೋಡಿಗೆ ಬರುವ ವೇಳೆ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ನೊಂದ ಬಾಲಕಿ ಬಂಟ್ವಾಳ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಳು.
ಕಲ್ಲಡ್ಕದಿಂದ ಬರುವ ವೇಳೆ ಪಾಣೆಮಂಗಳೂರು ಬಸ್ ಸ್ಟಾಪ್ ನಲ್ಲಿ ಬಸ್ ನಲ್ಲಿದ್ದ ಎಲ್ಲಾ ಪ್ರಯಾಣಿಕರು ಇಳಿದು ಹೋಗಿದ್ದರು. ಅ ಸಂದರ್ಭದಲ್ಲಿ ಬಸ್ ನಲ್ಲಿ ನೊಂದ ಬಾಲಕಿ,ಬಸ್ ಚಾಲಕ ಮತ್ತು ನಿರ್ವಾಹಕ ಮೂರೇ ಜನ ಇದ್ದ ವೇಳೆ ಈತ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಪ್ರಕರಣ ದಾಖಲಾದ ಅರ್ಧ ಗಂಟೆಯಲ್ಲಿ ಆರೋಪಿಯನ್ನು ಬಂಟ್ವಾಳ ನಗರ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ ಪೆಕ್ಟರ್ ವಿವೇಕಾನಂದ ನೇತೃತ್ವದಲ್ಲಿ ಬಂಟ್ವಾಳ ನಗರ ಠಾಣಾ ಎಸ್.ಐ. ರಾಮಕೃಷ್ಣ ಅವರ ತಂಡ ಬಂಧಿಸಿದೆ.



























