ಮಂಗಳೂರು : ಜಿಲ್ಲಾ ಕಾರಾಗೃಹದಲ್ಲಿ ಭಾನುವಾರ ಭಾರೀ ಸಂಖ್ಯೆಯ ಪೊಲೀಸರು ದಿಢೀರ್ ತಪಾಸಣೆ ನಡೆಸಿದರು.

ಚುನಾವಣೆ ಹಿನ್ನೆಲೆಯಲ್ಲಿ ವಿಶೇಷ ತಪಾಸಣೆ ನಡೆಸಿದ್ದು, ದಿಢೀರ್ ಆಗಿ ಸುಮಾರು 250 ಮಂದಿ ಪೊಲೀಸರು ಏಕಕಾಲಕ್ಕೆ ಆಗಮಿಸಿದ್ದಾರೆ.
ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಜೈನ್ ನೇತೃತ್ವದಲ್ಲಿ, ಡಿಸಿಪಿ ಅಂಶುಕುಮಾರ್ ಸಹಿತ ಹಿರಿಯ ಅಧಿಕಾರಿಗಳು ತಪಾಸಣೆ ನಡೆಸಿದರು.

ಜೈಲಿನಲ್ಲಿ ಒಂದೂವರೆ ಗಂಟೆ ಕಾಲ ತಪಾಸಣೆ ನಡೆಸಿದ್ದು, ಖೈದಿಗಳ ಸೆಲ್ ಒಳಗಡೆಯೂ ತಪಾಸಣೆ ನಡೆಸಿದ್ದಾರೆ. ಪರಿಶೀಲನೆ ಬಳಿಕ ಹೊರಬಂದ ಕಮಿಷನರ್ ಕುಲದೀಪ್ ಜೈನ್, ಈ ರೀತಿ ತಪಾಸಣೆ ಪ್ರತಿ ಬಾರಿ ನಡೆಸಲಾಗುವುದು. ಖೈದಿಗಳ ಬಳಿ ಬೀಡಿ, ಸಿಗರೇಟ್, ಗುಟ್ಕಾ, ಪಾನ್ ಮಸಾಲಾ ಪತ್ತೆಯಾಗಿದೆ. ಯಾವುದೇ ನಿಷೇಧಿತ ವಸ್ತುಗಳು ಪತ್ತೆಯಾಗಿಲ್ಲ. ಜೈಲಿನ ಅಧಿಕಾರಿಗಳ ಜೊತೆಗೆ ಮಾತುಕತೆ ನಡೆಸಿದ್ದು, ಈ ರೀತಿಯ ಮಾದಕ ವಸ್ತುಗಳು ಹೇಗೆ ಖೈದಿಗಳಿಗೆ ಸಿಗುತ್ತದೆ ಎಂಬ ಬಗ್ಗೆ ಪರಿಶೀಲನೆ ನಡೆಸಲು ಸೂಚಿಸಿದ್ದೇನೆ ಎಂದರು.

























