Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಸೀದಿಯೊಳಗೆ ಅಪ್ರಾಪ್ತ ಬಾಲಕನ ಮೇಲೆ ಹಲ್ಲೆ : ಪ್ರಕರಣ ದಾಖಲು..!!

    ಮಸೀದಿಯೊಳಗೆ ಅಪ್ರಾಪ್ತ ಬಾಲಕನ ಮೇಲೆ ಹಲ್ಲೆ : ಪ್ರಕರಣ ದಾಖಲು..!!

    ವಿಟ್ಲ: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ..!!

    ವಿಟ್ಲ: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ..!!

    ಬೆಳ್ತಂಗಡಿ : ತಿಥಿ ಕಾರ್ಯಕ್ರಮಕ್ಕೆ ಆಮೆಗಳ ಬೇಟೆ : ನಾಲ್ಕು ಮಂದಿಯನ್ನು ಬಂಧಿಸಿದ ಪೊಲೀಸರು.!!

    ಬೆಳ್ತಂಗಡಿ : ತಿಥಿ ಕಾರ್ಯಕ್ರಮಕ್ಕೆ ಆಮೆಗಳ ಬೇಟೆ : ನಾಲ್ಕು ಮಂದಿಯನ್ನು ಬಂಧಿಸಿದ ಪೊಲೀಸರು.!!

    ವಿದೇಶದಲ್ಲೇ ಕುಳಿತು ಮಂಗಳೂರು ಯುವತಿಯರಿಗೆ ಗಾಳ: ಪತಿಯ ಪ್ರೀತಿ, ಪ್ರಣಯದಾಟ ಬಿಚ್ಚಿಟ್ಟ ಪತ್ನಿ..!!

    ವಿದೇಶದಲ್ಲೇ ಕುಳಿತು ಮಂಗಳೂರು ಯುವತಿಯರಿಗೆ ಗಾಳ: ಪತಿಯ ಪ್ರೀತಿ, ಪ್ರಣಯದಾಟ ಬಿಚ್ಚಿಟ್ಟ ಪತ್ನಿ..!!

    ಪುತ್ತೂರು: ರವಿ ಕಲ್ಕಾರ್ ಹೃದಯಾಘಾತದಿಂದ ನಿಧನ..!!!

    ಪುತ್ತೂರು: ರವಿ ಕಲ್ಕಾರ್ ಹೃದಯಾಘಾತದಿಂದ ನಿಧನ..!!!

    ಡಿವೈಡರ್​​ ಹಾರಿ KSRTC ಬಸ್​​ಗೆ ಗುದ್ದಿದ ಕಾರು: ಐವರು ಸಾವು..!!

    ಡಿವೈಡರ್​​ ಹಾರಿ KSRTC ಬಸ್​​ಗೆ ಗುದ್ದಿದ ಕಾರು: ಐವರು ಸಾವು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಜ್ಯ

ವಿಧಾನಸಭಾ ಚುನಾವಣೆ ಹಿನ್ನೆಲೆ : ಎಸ್​​ಬಿಐನಲ್ಲಿ ಇಂದಿನಿಂದ ಸಿಗಲಿದೆ ಚುನಾವಣಾ ಬಾಂಡ್; ಏನಿದು, ಯಾರು ಖರೀದಿಸಬಹುದು..!??

April 3, 2023
in ರಾಜ್ಯ
0
ವಿಧಾನಸಭಾ ಚುನಾವಣೆ ಹಿನ್ನೆಲೆ : ಎಸ್​​ಬಿಐನಲ್ಲಿ ಇಂದಿನಿಂದ ಸಿಗಲಿದೆ ಚುನಾವಣಾ ಬಾಂಡ್; ಏನಿದು, ಯಾರು ಖರೀದಿಸಬಹುದು..!??
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಇಂದಿನಿಂದ (ಏಪ್ರಿಲ್ 3) ಚುನಾವಣಾ ಬಾಂಡ್​ಗಳ ಮಾರಾಟ ಮಾಡಲು ಆರಂಭಿಸಿದೆ.

Advertisement
Advertisement
Advertisement

ಏಪ್ರಿಲ್ 12ರ ವರೆಗೆ ಎಸ್​​ಬಿಐನ 29 ಶಾಖೆಗಳಲ್ಲಿ ಚುನಾವಣಾ ಬಾಂಡ್​ಗಳು ಖರೀದಿಗೆ ಲಭ್ಯ ಇರಲಿವೆ. ಕೇಂದ್ರ ಹಣಕಾಸು ಸಚಿವಾಲಯವು ಮಾರ್ಚ್ 31ರಂದು ‘ಎಲೆಕ್ಟೋರಲ್ ಬಾಂಡ್ ಸ್ಕೀಮ್ 2018’ ರ ಅಡಿಯಲ್ಲಿ ಚುನಾವಣಾ ಬಾಂಡ್‌ಗಳ 26ನೇ ಕಂತಿನ ಘೋಷಣೆ ಮಾಡಿತ್ತು. ಇದರಂತೆ, ಭಾರತೀಯ ನಾಗರಿಕರು, ಉದ್ಯಮಿಗಳು ಬಾಂಡ್​ಗಳನ್ನು ಖರೀದಿಸಬಹುದಾಗಿದ್ದು, ರಾಜಕೀಯ ಪಕ್ಷಗಳು ತೆರೆದಿರುವ ಎಲೆಕ್ಟೋರಲ್ ಬಾಂಡ್ ಖಾತೆಗಳ ಮೂಲಕ ದೇಣಿಗೆ ನೀಡಬಹುದಾಗಿದೆ. ಬಾಂಡ್​​ಗಳು ಇಶ್ಯೂ ಮಾಡಿದ 15 ದಿನಗಳ ಅವಧಿಗೆ ಮಾನ್ಯತೆ ಹೊಂದಿರುತ್ತವೆ. ಈ ಅವಧಿಯ ಒಳಗಾಗಿ ರಾಜಕೀಯ ಪಕ್ಷಗಳು ಅವುಗಳನ್ನು ಪಡೆಯಬೇಕಾಗಿದೆ.

ರಾಜ್ಯ ವಿಧಾನಸಭೆ ಚುನಾವಣೆ ಮೇ 10ರಂದು ನಡೆಯಲಿದ್ದು, ಫಲಿತಾಂಶ ಮೇ 13ರಂದು ಪ್ರಕಟವಾಗಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ಮಾರ್ಚ್ 29ರಂದು ಘೋಷಿಸಿತ್ತು.

Advertisement
Advertisement

ಈ ಹಿಂದಿನ ಮಾರಾಟದ ಅವಧಿಯಲ್ಲಿ, ಜನವರಿ ತಿಂಗಳಲ್ಲಿ ಎಸ್​ಬಿಐ 308.76 ಕೋಟಿ ರೂ. ಮೊತ್ತದ ಚುನಾವಣಾ ಬಾಂಡ್​ಗಳ ಗುಚ್ಛವನ್ನು ಮಾರಾಟ ಮಾಡಿತ್ತು. ಫೆಬ್ರುವರಿಯಲ್ಲಿ ನಡೆದ ತ್ರಿಪುರಾ, ಮೇಘಾಲಯ ಹಾಗೂ ನಾಗಾಲ್ಯಾಂಡ್ ವಿಧಾನಸಭೆ ಚುನಾವಣೆ ಗಮನದಲ್ಲಿಟ್ಟುಕೊಂಡು ಬಾಂಡ್​​ಗಳನ್ನು ಬಿಡುಗಡೆ ಮಾಡಲಾಗಿತ್ತು ಎಂಬುದು ಆರ್​ಟಿಐ ಅರ್ಜಿಯಡಿ ಪಡೆದ ಮಾಹಿತಿಯಿಂದ ತಿಳಿದು ಬಂದಿದೆ.

2018ರ ನಂತರ ಈ ವರೆಗೆ ಎಸ್​ಬಿಐ 12,008.59 ಕೋಟಿ ರೂ. ಮೌಲ್ಯದ ಚುನಾವಣಾ ಬಾಂಡ್​​ಗಳನ್ನು ಮಾರಾಟ ಮಾಡಿದೆ. ಈ ಪೈಕಿ 11,984.91 ಕೋಟಿ ರೂ. ಮೌಲ್ಯದ ಬಾಂಡ್​ಗಳನ್ನು ರಾಜಕೀಯ ಪಕ್ಷಗಳು ರಿಡೀಮ್ ಮಾಡಿಕೊಂಡಿವೆ.

ಪ್ರತಿ ವರ್ಷ ಜನವರಿ, ಏಪ್ರಿಲ್, ಜುಲೈ ಹಾಗೂ ಅಕ್ಟೋಬರ್​​ ತಿಂಗಳಲ್ಲಿ ನಾಲ್ಕರಿಂದ 10 ದಿನಗಳ ಅವಧಿಗೆ ಚುನಾವಣಾ ಬಾಂಡ್​​ಗಳನ್ನು ಮಾರಾಟ ಮಾಡಲಾಗುತ್ತದೆ. ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಹೆಚ್ಚುವರಿಯಾಗಿ 30 ದಿನಗಳ ಕಾಲ ಮಾರಾಟಕ್ಕೆ ಅವಕಾಶ ಕಲ್ಪಿಸಲಾಗುತ್ತದೆ. ವಿಧಾನಸಭೆ ಚುನಾವಣೆಗಳ ಸಂದರ್ಭದಲ್ಲಿ ಹೆಚ್ಚುವರಿಯಾಗಿ 15 ದಿನಗಳ ಕಾಲ ಬಾಂಡ್​ಗಳ ಮಾರಾಟಕ್ಕೆ 2022ರಿಂದ ಹಣಕಾಸು ಸಚಿವಾಲಯ ಅನುಮತಿ ನೀಡಿದೆ.

ಚುನಾವಣಾ ಬಾಂಡ್ ಎಂದರೇನು​​..!??

ರಾಜಕೀಯ ಪಕ್ಷಗಳಿಗೆ ದೇಣಿಗೆ ನೀಡುವುದಕ್ಕಾಗಿ ವ್ಯಕ್ತಿಗಳು ಅಥವಾ ಸಂಸ್ಥೆ / ಕಂಪನಿಗಳು ಈ ಚುನಾವಣಾ ಬಾಂಡ್​​ಗಳನ್ನು ಉಪಯೋಗಿಸುತ್ತವೆ. ಎಸ್​ಬಿಐ ಬ್ಯಾಂಕ್ ನಿರ್ದಿಷ್ಟ ಮುಖಬೆಲೆಯ ಚುನಾವಣಾ ಬಾಂಡ್​​ಗಳನ್ನು ಬಿಡುಗಡೆ ಮಾಡಿ ಮಾರಾಟ ಮಾಡುತ್ತದೆ. ಚುನಾವಣಾ ಬಾಂಡ್‌ಗಳನ್ನು ಅರ್ಹ ರಾಜಕೀಯ ಪಕ್ಷವು ಅಧಿಕೃತ ಬ್ಯಾಂಕ್‌ ಖಾತೆಯ ಮೂಲಕ ಮಾತ್ರವೇ ಎನ್‌ಕ್ಯಾಶ್ ಮಾಡಬಹುದಾಗಿದೆ.

ಚುನಾವಣಾ ಬಾಂಡ್ ಅನ್ನು ಯಾರು, ಹೇಗೆ ಖರೀದಿಸಬಹುದು..??

ನಿರ್ದಿಷ್ಟ ರಾಜಕೀಯ ಪಕ್ಷಕ್ಕೆ ದೇಣಿಗೆ ನೀಡಲು ಬಯಸುವ ವ್ಯಕ್ತಿ ಅಥವಾ ಸಂಸ್ಥೆ / ಕಂಪನಿಗಳು ಚುನಾವಣಾ ಬಾಂಡ್​ಗಳನ್ನು ಖರೀದಿಸಬಹುದು. ಎಸ್​ಬಿಐ ಬ್ಯಾಂಕ್​ನ ಅಧಿಕೃತ ಶಾಖೆಗಳಲ್ಲಿ ಚುನಾವಣಾ ಬಾಂಡ್​ಗಳು ದೊರೆಯುತ್ತವೆ. ಡಿಜಿಟಲ್ ಪಾವತಿ ಅಥವಾ ಚೆಕ್ ನೀಡಿ ಚುನಾವಣಾ ಬಾಂಡ್​ಗಳನ್ನು ಖರೀದಿಸಬೇಕು. ನಗದು ನೀಡಿ ಖರೀದಿಸಲು ಅವಕಾಶವಿಲ್ಲ. ಚುನಾವಣಾ ಬಾಂಡ್​ಗಳನ್ನು ಖರೀದಿಸಿದ ದೇಣಿಗೆದಾರು ಅದನ್ನು ತನ್ನಿಚ್ಛೆಯ ರಾಜಕೀಯ ಪಕ್ಷಕ್ಕೆ ನೀಡಬಹುದು. ಅದನ್ನು ರಾಜಕೀಯ ಪಕ್ಷ 15 ದಿನಗಳ ಒಳಗಾಗಿ ಎನ್​ಕ್ಯಾಶ್ ಮಾಡಿಕೊಳ್ಳಬೇಕು.

ಯಾವೆಲ್ಲ ರಾಜಕೀಯ ಪಕ್ಷಗಳು ಚುನಾವಣಾ ಬಾಂಡ್ ಸ್ವೀಕರಿಸಬಹುದು..??

ಭಾರತದ ನಾಗರಿಕರು ಹಾಗೂ ಸಂಸ್ಥೆಗಳು ಚುನಾವಣಾ ಬಾಂಡ್​ಗಳ ಖರೀದಿಗೆ ಅರ್ಹರಾಗಿರುತ್ತಾರೆ. ಜಂಟಿಯಾಗಿಯೂ ಚುನಾವಣಾ ಬಾಂಡ್​ಗಳನ್ನು ಖರೀದಿಸಬಹುದಾಗಿದೆ. ಕೆವೈಸಿ ದೃಢೀಕರಿಸಿದ ಬಳಿಕವಷ್ಟೇ ಚುನಾವಣಾ ಬಾಂಡ್​ಗಳನ್ನು ವಿತರಿಸಲಾಗುತ್ತದೆ. ಈ ಬಾಂಡ್​​ಗಳು ಇದು ಪಾವತಿ ಮಾಡುವವರ ಹೆಸರನ್ನು ಹೊಂದಿರುವುದಿಲ್ಲ.

1951ರ ಪ್ರಜಾ ಪ್ರತಿನಿಧಿ ಕಾಯ್ದೆಯ ಸೆಕ್ಷನ್ 29ಎ ಅಡಿಯಲ್ಲಿ ನೋಂದಣಿಯಾಗಿರುವ ರಾಜಕೀಯ ಪಕ್ಷ ಮಾತ್ರ ಚುನಾವಣಾ ಬಾಂಡ್​ಗಳನ್ನು ಸ್ವೀಕರಿಸಲು ಅವಕಾಶವಿದೆ. ಅಲ್ಲದೆ, ಹಿಂದಿನ ಲೋಕಸಭೆ ಚುನಾವಣೆ ಹಾಗೂ ರಾಜ್ಯ ಚುನಾವಣೆಗಳಲ್ಲಿ ಶೇಕಡಾ 1ಕ್ಕಿಂತ ಕಡಿಮೆ ಮತಗಳನ್ನು ಪಡೆದಿದ್ದರೆ ಅಂಥ ರಾಜಕೀಯ ಪಕ್ಷ ಚುನಾವಣಾ ಬಾಂಡ್​​ ಸ್ವೀಕರಿಸಲು ಅರ್ವಾಗಿರುವುದಿಲ್ಲ.

ಚುನಾವಣಾ ಬಾಂಡ್​ ಬಿಡುಗಡೆಗೆ ಕಾರಣವೇನು..!??

ರಾಜಕೀಯ ಪಕ್ಷಗಳಿಗೆ ಹಣಕಾಸು ನೆರವು ನೀಡುವ ವ್ಯವಸ್ಥೆಯನ್ನು ಹೆಚ್ಚು ಪಾರದರ್ಶಕಗೊಳಿಸುವುದಕ್ಕಾಗಿ ಕೇಂದ್ರ ಸರ್ಕಾರ 2017ರ ಹಣಕಾಸು ಕಾಯ್ದೆಯಲ್ಲಿ ಚುನಾವಣಾ ಬಾಂಡ್​​ ಪರಿಚಯಿಸಿತು. 2018ರಲ್ಲಿ ಚುನಾವಣಾ ಬಾಂಡ್ ಯೋಜನೆ ಬಗ್ಗೆ ಸರ್ಕಾರ ಅಧಿಸೂಚನೆ ಹೊರಡಿಸಿತ್ತು. 2017ರ ಬಜೆಟ್​​ನಲ್ಲಿ ಅಂದಿನ ಹಣಕಾಸು ಸಚಿವ ಅರುಣ್ ಜೇಟ್ಲಿ ಚುನಾವಣಾ ಬಾಂಡ್​ಗಳನ್ನು ಬಿಡುಗಡೆ ಮಾಡುವ ಯೋಜನೆ ಬಗ್ಗೆ ಘೋಷಿಸಿದ್ದರು.

Advertisement
Previous Post

ವಿಟ್ಲ: ಜೇಸಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ಮಕ್ಕಳ ಬೇಸಿಗೆ ಶಿಬಿರ

Next Post

ಡೆಡ್ಲಿ ಫಿಶ್‌ : ಮೀನು ಸೇವಿಸಿ ಮಹಿಳೆ ಮೃತ್ಯು ; ಪತಿ ಕೋಮಾದಲ್ಲಿ

OtherNews

ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!
Featured

ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!

October 10, 2025
ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!
Featured

ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!

August 4, 2025
ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!
ರಾಜ್ಯ

ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!

May 9, 2025
ರಾಜ್ಯದಲ್ಲಿ ಡೀಸೆಲ್ ದರ ಏರಿಕೆ; ಇಂದು ಮಧ್ಯರಾತ್ರಿಯಿಂದಲೇ ನೂತನ ದರ ಅನ್ವಯ..!!
ಪುತ್ತೂರು

ರಾಜ್ಯದಲ್ಲಿ ಡೀಸೆಲ್ ದರ ಏರಿಕೆ; ಇಂದು ಮಧ್ಯರಾತ್ರಿಯಿಂದಲೇ ನೂತನ ದರ ಅನ್ವಯ..!!

April 1, 2025
ಮನೆ ಬಾಗಿಲಿಗೆ ಬರಲಿದೆ ಕರ್ನಾಟಕದ 14 ದೇಗುಲಗಳ ಪ್ರಸಾದ; ಇ-ಪ್ರಸಾದ ಸೇವೆ ಆರಂಭ..!!!
Featured

ಮನೆ ಬಾಗಿಲಿಗೆ ಬರಲಿದೆ ಕರ್ನಾಟಕದ 14 ದೇಗುಲಗಳ ಪ್ರಸಾದ; ಇ-ಪ್ರಸಾದ ಸೇವೆ ಆರಂಭ..!!!

March 28, 2025
ನಂದಿನಿ ಹಾಲಿನ ದರ 4 ರೂ. ಏರಿಕೆ; ರಾಜ್ಯದ ಜನರಿಗೆ ಶಾಕಿಂಗ್ ನ್ಯೂಸ್‌..!!!
Featured

ನಂದಿನಿ ಹಾಲಿನ ದರ 4 ರೂ. ಏರಿಕೆ; ರಾಜ್ಯದ ಜನರಿಗೆ ಶಾಕಿಂಗ್ ನ್ಯೂಸ್‌..!!!

March 27, 2025

Leave a Reply Cancel reply

Your email address will not be published. Required fields are marked *

Recent News

ಮಸೀದಿಯೊಳಗೆ ಅಪ್ರಾಪ್ತ ಬಾಲಕನ ಮೇಲೆ ಹಲ್ಲೆ : ಪ್ರಕರಣ ದಾಖಲು..!!

ಮಸೀದಿಯೊಳಗೆ ಅಪ್ರಾಪ್ತ ಬಾಲಕನ ಮೇಲೆ ಹಲ್ಲೆ : ಪ್ರಕರಣ ದಾಖಲು..!!

February 16, 2026
ವಿಟ್ಲ: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ..!!

ವಿಟ್ಲ: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ..!!

February 16, 2026
ಬೆಳ್ತಂಗಡಿ : ತಿಥಿ ಕಾರ್ಯಕ್ರಮಕ್ಕೆ ಆಮೆಗಳ ಬೇಟೆ : ನಾಲ್ಕು ಮಂದಿಯನ್ನು ಬಂಧಿಸಿದ ಪೊಲೀಸರು.!!

ಬೆಳ್ತಂಗಡಿ : ತಿಥಿ ಕಾರ್ಯಕ್ರಮಕ್ಕೆ ಆಮೆಗಳ ಬೇಟೆ : ನಾಲ್ಕು ಮಂದಿಯನ್ನು ಬಂಧಿಸಿದ ಪೊಲೀಸರು.!!

February 15, 2026
ವಿದೇಶದಲ್ಲೇ ಕುಳಿತು ಮಂಗಳೂರು ಯುವತಿಯರಿಗೆ ಗಾಳ: ಪತಿಯ ಪ್ರೀತಿ, ಪ್ರಣಯದಾಟ ಬಿಚ್ಚಿಟ್ಟ ಪತ್ನಿ..!!

ವಿದೇಶದಲ್ಲೇ ಕುಳಿತು ಮಂಗಳೂರು ಯುವತಿಯರಿಗೆ ಗಾಳ: ಪತಿಯ ಪ್ರೀತಿ, ಪ್ರಣಯದಾಟ ಬಿಚ್ಚಿಟ್ಟ ಪತ್ನಿ..!!

February 15, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page