ಪುತ್ತೂರು : ಎರಡು ಕಾರುಗಳ ನಡುವೆ ಅಪಘಾತ ಸಂಭವಿಸಿದ ಘಟನೆ ಪುತ್ತೂರಿನ ಮಾಯಿ ದೆ ದೇವುಸ್ ಚರ್ಚ್ ಬಳಿ ನಡೆದಿದೆ.

ಘಟನೆಯಲ್ಲಿ ಎರಡು ಕಾರುಗಳಿಗೂ ಅಲ್ಪ-ಸ್ವಲ್ಪ ಹಾನಿಯಾಗಿದ್ದು, ಕಾರಿನಲ್ಲಿದ್ದವರಿಗೆ ಯಾವುದೇ ಅಪಾಯ ಸಂಭವಿಸಿಲ್ಲ ಎಂದು ವರದಿಯಾಗಿದೆ.

ಘಟನಾ ಸ್ಥಳಕ್ಕೆ ಪುತ್ತೂರು ಸಂಚಾರಿ ಠಾಣಾ ಪೊಲೀಸರು ಆಗಮಿಸಿದ್ದು, ಘಟನೆಯಿಂದಾಗಿ ಕೆಲಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು..


























