ಬೆಳ್ತಂಗಡಿ : ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಸಂದರ್ಭ ಪರಿಚಯಸ್ಥ ಸಹಪ್ರಯಾಣಿಕೆಯೊಂದಿಗೆ ಮಾತನಾಡಿದ್ದನ್ನೇ ನೆಪವಾಗಿರಿಸಿ ಯುವಕರ ಗುಂಪೊಂದು ಹಲ್ಲೆ ನಡೆಸಿದ ಘಟನೆ ತಾಲೂಕಿನ ಉಜಿರೆಯಲ್ಲಿ ವರದಿಯಾಗಿದೆ.
ಕಕ್ಕಿಂಜೆ ನಿವಾಸಿ ಶಾಹಿಲ್ (22) ಹಲ್ಲೆಗೆ ಒಳಗಾದ ಯುವಕ.

ಈತ ಮಂಗಳೂರಿನಲ್ಲಿ ಕೆಲಸ ಮಾಡಿಕೊಂಡಿದ್ದ. ಬಸ್ಸಿನಲ್ಲಿ ಬರುತ್ತಿದ್ದ ವೇಳೆ ತನ್ನ ಪರಿಚಯದ ಯುವತಿಯೊಂದಿಗೆ ಮಾತನಾಡುತ್ತಾ ಪ್ರಯಾಣಿಸುತ್ತಿದ್ದ ಎನ್ನಲಾಗಿದೆ.
ಯುವತಿ ಬೆಳ್ತಂಗಡಿಯಲ್ಲಿ ಇಳಿದಿದ್ದು, ಬಸ್ಸಿನಲ್ಲಿ ಇವರನ್ನು ಗಮನಿಸಿ ಯಾರೋ ಯುವಕರಿಗೆ ಮಾಹಿತಿ ನೀಡಿದ್ದು, ಈತನನ್ನು ಉಜಿರೆಯಲ್ಲಿ ಕಾದು ನಿಂತಿದ್ದ ಯುವಕರ ತಂಡ ಬಸ್ಸಿನಿಂದ ಹೊರಗೆಳೆದು ಹಲ್ಲೆ ಮಾಡಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.
ಈ ಬಗ್ಗೆ ಶಾಹಿದ್ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

























