ಕರ್ನಾಟಕ ರಾಜ್ಯ ವಿಧಾನ ಸಭಾ ಚುನಾವಣೆ 2023ಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕದ ವ್ಯಾಪ್ತಿಯಲ್ಲಿ ಚುನಾವಣೆಗೆ ಸಂಬಂಧಿಸಿದ ಕರ್ತವ್ಯಗಳನ್ನು ನಿರ್ವಹಿಸಲು ಮೊದಲ ಹಂತದಲ್ಲಿ 4 ಸಿಆರ್ ಪಿಎಫ್ ಕಂಪನಿಗಳು ಆಗಮಿಸಿದ್ದು, ಅವುಗಳನ್ನು ಪುತ್ತೂರು, ಬೆಳ್ತಂಗಡಿ, ಬಂಟ್ವಾಳ, ಸುಳ್ಯ ವಿಧಾನ ಸಭಾ ಕ್ಷೇತ್ರಗಳಿಗೆ ತಲಾ ಒಂದರಂತೆ ಕರ್ತವ್ಯಕ್ಕೆ ನಿಯೋಜಿಸಲಾಗಿದೆ.

ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚು ಕಂಪನಿಗಳು ಚುನಾವಣೆ ಕರ್ತವ್ಯಕ್ಕೆ ಆಗಮಿಸಲಿವೆ.

ಈ ಕಂಪನಿಗಳು ಚುನಾವಣೆಗೆ ಸಂಬಂಧಿಸಿದಂತೆ Area Domination, ಚೆಕ್ ಪೋಸ್ಟ್ ಕರ್ತವ್ಯ, ಸ್ಟ್ರಾಂಗ್ ರೂಮ್ ಭದ್ರಿಕೆ ಕರ್ತವ್ಯ, ಪ್ರಮುಖ ಸ್ಥಳಗಳಲ್ಲಿ ರೂಟ್ ಮಾರ್ಚ್, ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಸ್ಥಳೀಯ ಪೊಲೀಸ್ ರಿಗೆ ಸಹಾಯಕ ಕರ್ತವ್ಯ ಹಾಗೂ ಇತರ ಚುನಾವಣೆಗೆ ಸಂಬಂಧಿಸಿದ ಕರ್ತವ್ಯಗಳನ್ನು ನಿರ್ವಹಿಸಲಿವೆ.
























