ಭಾರತೀಯ ಜನತಾ ಪಾರ್ಟಿ ಪುತ್ತೂರು ವಿಧಾನಸಭಾ ಕ್ಷೇತ್ರದ ವತಿಯಿಂದ ಬಿಜೆಪಿ ಸ್ಥಾಪನ ದಿನದ ಸಂಭ್ರಮಾಚರಣೆಯನ್ನು ಪುತ್ತೂರು ಬಿಜೆಪಿ ಕಚೇರಿಯಲ್ಲಿ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಬಿಜೆಪಿ ವಿಭಾಗ ಸಹ ಪ್ರಭಾರಿ ಗೋಪಾಲಕೃಷ್ಣ ಹೇರಳೆ, ಜಿಲ್ಲಾ ಬಿಜೆಪಿ ಸಹ ಪ್ರಭಾರಿ ಮತ್ತು ಪುತ್ತೂರು ವಿಧಾನಸಭಾ ಕ್ಷೇತ್ರದ ಚುನಾವಣಾ ಪ್ರಭಾರಿ ರಾಜೇಶ್ ಕಾವೇರಿ ಕುಂದಾಪುರ, ಬಿಜೆಪಿ ಜಿಲ್ಲಾ ಹಿಂದುಳಿದ ವರ್ಗಗಳ ಅಧ್ಯಕ್ಷರಾದ ಆರ್.ಸಿ ನಾರಾಯಣ,ನಗರ ಮಂಡಲದ ಪ್ರಧಾನ ಕಾರ್ಯದರ್ಶಿಗಳಾದ ಜಯಶ್ರೀ ಎಸ್ ಶೆಟ್ಟಿ ಮತ್ತು ಯುವರಾಜ್ ಕೆ ಪೆರಿಯತ್ತೋಡಿ, ಪದಾಧಿಕಾರಿಗಳು, ಜನಪ್ರತಿನಿಧಿಗಳು, ಮಹಾಶಕ್ತಿ ಕೇಂದ್ರ ಶಕ್ತಿ ಕೇಂದ್ರಗಳ ಪದಾಧಿಕಾರಿಗಳು ಹಾಗೂ ಪಕ್ಷದ ಹಿರಿಯ ಕಿರಿಯ ಕಾರ್ಯಕರ್ತರು ಭಾಗವಹಿಸಿದ್ದರು.


























