ವಿಧಾನಸಭಾ ಚುನಾವಣಾ ದಿನಾಂಕ ಈಗಾಗಲೇ ಘೋಷಣೆಯಾಗಿದ್ದು, ಎಲ್ಲಾ ಪಕ್ಷಗಳು ಭರ್ಜರಿ ಸಿದ್ಧತೆ ಮಾಡಿಕೊಳ್ಳುತ್ತಿದ್ದು, ಕಾಂಗ್ರೆಸ್ ಈಗಾಗಲೇ ಅಭ್ಯರ್ಥಿಗಳ ಎರಡು ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಬಿಜೆಪಿ ಪಕ್ಷದ ಮೊದಲನೇ ಪಟ್ಟಿ ಇನ್ನೂ ಬಿಡುಗಡೆಗೊಂಡಿಲ್ಲ.., ಪುತ್ತೂರು ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸ್ಥಾನಕ್ಕಾಗಿ ಹಲವಾರು ಮಂದಿಯ ಹೆಸರು ಮುನ್ನಲೆಯಲ್ಲಿ ಕೇಳಿ ಬರುತ್ತಿದೆ. ಭಾರತೀಯ ಜನತಾ ಪಾರ್ಟಿಯಿಂದ ಈ ಭಾರೀಯಾದರೂ ಅರುಣ್ ಕುಮಾರ್ ಪುತ್ತಿಲ ರವರಿಗೆ ಸ್ಪರ್ಧಿಸಲು ಅವಕಾಶ ಸಿಗಬೇಕೆನ್ನುವುದು ಹಲವರ ಆಶಯವಾಗಿದೆ.

ಈ ಬಾರಿ ಪುತ್ತೂರು ವಿಧಾನ ಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಹಿಂದೂ ಸಂಘಟನೆಗಳ ಮುಖಂಡ, ಧಾರ್ಮಿಕ ಮುಂದಾಳು ಅರುಣ್ ಕುಮಾರ್ ಪುತ್ತಿಲ ರವರಿಗೆ ಸ್ಪರ್ಧಿಸಲು ಅವಕಾಶ ಸಿಗಬೇಕೆನ್ನುವುದು ಹಲವರ ಆಶಯವಾಗಿದ್ದು, ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಅಭಿಯಾನಗಳು ಹಲವು ಸಮಯಗಳ ಮೊದಲೇ ಪ್ರಾರಂಭವಾಗಿವೆ.
ಅರುಣ್ ಕುಮಾರ್ ಪುತ್ತಿಲ ರವರಿಗೆ ಈ ಬಾರಿ ಚುನಾವಣೆಗೆ ಸ್ಪರ್ಧಿಸಲು ಅವಕಾಶ ನೀಡಬೇಕೆಂದು ಪುತ್ತಿಲ ಅಭಿಮಾನಿಗಳು ಟ್ವೀಟರ್ ಅಭಿಯಾನ ನಡೆಸುತ್ತಿದ್ದು, ಇಂದು ಕೂಡಾ ಟ್ವೀಟರ್ ಅಭಿಯಾನವನ್ನು ಹಮ್ಮಿಕೊಳ್ಳಲಾಗಿತ್ತು.

ಹಿಂದೂ ಸಂಘಟನೆಗಳ ಮುಖಂಡ, ಕಾರ್ಯಕರ್ತರ ನೆಚ್ಚಿನ ನಾಯಕ ಅರುಣ್ ಪುತ್ತಿಲ ರವರಿಗೆ ಈ ಬಾರಿಯಾದರೂ ಬಿಜೆಪಿಯಿಂದ ಸ್ಪರ್ಧಿಸಲು ಅವಕಾಶ ನೀಡಬೇಕೆನ್ನುವುದು ಪುತ್ತಿಲ ಅಭಿಮಾನಿ ಬಳಗದ ಹಾಗೂ ಹಲವು ಕಾರ್ಯಕರ್ತರ ಮನದಾಸೆಯಾಗಿದ್ದು, ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಬಳಿಕವೇ ಈ ಬಗ್ಗೆ ಸ್ಪಷ್ಟ ಚಿತ್ರಣ ಸಿಗಲಿದೆ.
























