ಪುತ್ತೂರು : ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ತಪ್ಪಿರುವುದಕ್ಕೆ ಹಾಲಿ ಶಾಸಕ ಸಂಜೀವ ಮಠಂದೂರು ರವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಟಿಕೆಟ್ ಹಂಚಿಕೆಯ ಬಗ್ಗೆ ಶಾಸಕ ಸಂಜೀವ ಮಠಂದೂರು ಅವರು ಪಕ್ಷದ ವರಿಷ್ಟರ ನಡೆಯ ಬಗ್ಗೆ ಅಸಮಾಧಾನ ಪ್ರಕಟಿಸಿದ್ದಾರೆ.
ಟಿಕೆಟ್ ನೀಡುವುದಾಗಿ ಪಕ್ಷದ ವತಿಯಿಂದ ತಿಳಿಸಲಾಗಿತ್ತು. ಹಾಗಾಗಿ ನಾಮಪತ್ರ ಸಲ್ಲಿಸಲು ತಯಾರಿ ನಡೆಸಲು ಸಿದ್ದತೆ ಮಾಡಿದ್ದೆ. ಆದರೇ ಕೊನೆಕ್ಷಣದಲ್ಲಿ ಟಿಕೆಟ್ ನೀಡಿಲ್ಲ.
ಯಾಕೆ ಎಂದು ತಿಳಿದಿಲ್ಲ.ನಾನು ಪಕ್ಷದ ಕೆಲಸ ಪ್ರಾಮಾಣಿಕವಾಗಿ ಮಾಡಿದ್ದೇನೆ. ನನಗೆ ನೋವಾಗಿರುವುದು ನಿಜ. ಪ್ರಾಮಾಣಿಕ ರಾಜಕಾರಣಕ್ಕೆ ಬೆಲೆ ಇಲ್ಲದಂತಾಗಿದೆ ಎಂದು ಸಂಜೀವ ಮಠಂದೂರು ತಿಳಿಸಿದ್ದಾರೆ..























