ಪುತ್ತೂರು ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿಯಾಗಿದ್ದ ದಿವ್ಯಪ್ರಭಾ ಗೌಡ ಚಿಲ್ತಡ್ಕ ರವರು ಕಾಂಗ್ರೆಸ್ ತೊರೆದು ಇಂದು ಜೆಡಿಎಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಗೊಂಡಿದ್ದಾರೆ.
ಬೆಂಗಳೂರು ಜೆಪಿ ನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರು ಜೆಡಿಎಸ್ ಸೇರ್ಪಡೆಯಾದರು.

ದಿವ್ಯಪ್ರಭಾ ರವರು ಜೆಡಿಎಸ್ ಪಕ್ಷದಿಂದ ಪುತ್ತೂರು ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂದು ತಿಳಿದು ಬಂದಿದೆ..
ಈ ವೇಳೆ ಮಾತನಾಡಿದ ಅವರು ‘ಪುತ್ತೂರು ಕ್ಷೇತ್ರದಲ್ಲಿ ದಳದ ಬಾವುಟವನ್ನು ಹಾರಿಸಲಿದ್ದೇವೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜನತಾ ದಳ ಏನು ಎಂಬುದನ್ನು ತೋರಿಸಲಿದ್ದೇವೆ’ ಎಂದು ಹೇಳಿದರು.

























