ವಿಟ್ಲ: ವಿಠ್ಠಲ್ ಜೇಸಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಆಡಳಿತಮಂಡಳಿ, ಶಿಕ್ಷಕರು, ಮತ್ತು ವಿದ್ಯಾರ್ಥಿಗಳು ಸಂವಿಧಾನ ಶಿಲ್ಪಿ, ಭಾರತರತ್ನ ಡಾ. ಬಿ. ಆರ್. ಅಂಬೇಡ್ಕರ್ ರ 132ನೇ ಜನ್ಮದಿನಾಚರಣೆಯನ್ನು ಆಚರಿಸಿದರು.

ಸಂಸ್ಥೆಯ ಅಧ್ಯಕ್ಷರಾದ ಯಲ್. ಯನ್. ಕೂಡೂರು,ಉಪಾಧ್ಯಕ್ಷರಾದ ಶ್ರೀಧರ್ ಶೆಟ್ಟಿ, ಕಾರ್ಯದರ್ಶಿಗಳಾದ ಮೋಹನ ಎ, ಜತೆ ಕಾರ್ಯದರ್ಶಿ ಶ್ರೀಪ್ರಕಾಶ್, ಕೋಶಾಧಿಕಾರಿ ಪ್ರಭಾಕರ ಶೆಟ್ಟಿ, ನಿರ್ದೇಶಕರಾದ ಮೋನಪ್ಪ ಶೆಟ್ಟಿ, ಗೋಕುಲ್ ಶೇಟ್, ವಿಜಯಪಾಯ್ಸ್, ಪಾಲ್ಗೊಂಡಿದ್ದರು.
ಸಂಸ್ಥೆಯ ಪ್ರಾಂಶುಪಾಲ ಜಯರಾಮ ರೈ ಸ್ವಾಗತಿಸಿ ದಿನದ ಮಹತ್ವವನ್ನು ತಿಳಿಸಿದರು. ಆಡಳಿತಾಧಿಕಾರಿ ರಾಧಾಕೃಷ್ಣ ಎ, ಶಿಕ್ಷಕ ಗುರುವಪ್ಪ ಹಾಗೂ ಬೋಧಕೇತರ ಸಿಬ್ಬಂದಿಗಳು, ಶಾಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.


























