ಬಂಟ್ವಾಳ : ಸಿದ್ಧಕಟ್ಟೆ ಸಹಕಾರಿ ವ್ಯವಸಾಯಿಕ ಸಂಘ ನಿ. ನಿರ್ದೇಶಕ, ಸಿದ್ಧಕಟ್ಟೆಯ ಕಾಂಗ್ರೆಸ್ ಮುಖಂಡ ದೇವರಾಜ್ ಸಾಲಿಯಾನ್ ಅವರು ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಹಾಗೂ ಬಂಟ್ವಾಳ ಕ್ಷೇತ್ರ ಸಮಿತಿ ಅಧ್ಯಕ್ಷ ದೇವಪ್ಪ ಪೂಜಾರಿ ಅವರ ಸಮ್ಮುಖದಲ್ಲಿ ಬಿಸಿರೋಡಿನ ಪಕ್ಷದ ಕಚೇರಿಯಲ್ಲಿ ಬಿಜೆಪಿ ಶಾಲು ಹಾಗೂ ಪಕ್ಷದ ಧ್ವಜ ಪಡೆದು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದರು.

ಬಂಟ್ವಾಳ ಬೂಡ ಅಧ್ಯಕ್ಷ ದೇವದಾಸ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿಗಳಾದ ಡೊಂಬಯ್ಯ ಅರಳ, ರವೀಶ್ ಶೆಟ್ಟಿ ಕರ್ಕಳ, ಕಾರ್ಯದರ್ಶಿ ರಮನಾಥ ರಾಯಿ, ಪಕ್ಷದ ಪ್ರಮುಖರಾದ ರತ್ನಾಕುಮಾರ್ ಚೌಟ, ಪ್ರಭಾಕರ ಪ್ರಭು, ಸಂಗಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷ ಸತೀಶ್ ಪೂಜಾರಿ, ಗ್ರಾಮ ಪಂಚಾಯತ್ ಸದಸ್ಯರಾದ ಉದಯ, ಸುನೀಲ್ ಶೆಟ್ಟಿಗಾರ್, ಸುರೇಶ್ ಕುಲಾಲ್, ದೀಪಕ್ ಶೆಟ್ಟಿಗಾರ್, ಉಮೇಶ್ ಗೌಡ, ಆನಂದ ಶಂಭೂರು ಸಹಿತ ಹಲವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.































