ಪುತ್ತೂರು : ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ರವರು ಎ.19 ರಂದು ನಾಮಪತ್ರ ಸಲ್ಲಿಸಲಿದ್ದಾರೆ.
ಎ.19 ರಂದು ಬೆಳಿಗ್ಗೆ ದೇವಸ್ಥಾನಕ್ಕೆ ತೆರಳಿ ಪ್ರಾರ್ಥನೆ ಸಲ್ಲಿಸಿ ಮೆರವಣಿಗೆ ಮೂಲಕ ತೆರಳಿ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಲವು ವರ್ಷಗಳಿಂದ ತನ್ನ ರೈ ಎಸ್ಟೇಟ್ ಎಜುಕೇಷನ್ ಮತ್ತು ಚಾರಿಟೇಬಲ್ ಟ್ರಸ್ಟ್(ರಿ.) ಮೂಲಕ ಹಲವಾರು ಸಾಮಾಜಿಕ, ಧಾರ್ಮಿಕ ಕಾರ್ಯಗಳಲ್ಲದೆ ಬಡವರ್ಗದ ಮನೆಯ ಹೆಣ್ಣು ಮಕ್ಕಳ ಮದುವೆ ಸಹಕಾರ, ಬಡವರ್ಗದ ಕುಟುಂಬದಲ್ಲಿ ಯಾರದರೂ ಅನಾರೋಗ್ಯದಿಂದಿದ್ದರೆ ಅವರ ಚಿಕಿತ್ಸೆ ಸಹಾಯ, ಮಳೆಯಿಂದಾಗಿ ಬಡ ವರ್ಗದವರ ಮನೆ ಕುಸಿದು ಬಿದ್ದರೆ ಹೊಸ ಮನೆ ನಿರ್ಮಾಣ ಅಷ್ಟೇ ಅಲ್ಲದೇ ದೀಪಾವಳಿ ಸಂದರ್ಭದಲ್ಲಿ ಬಡವರ ಜೊತೆ ದೀಪಾವಳಿ ಆಚರಿಸುವ ಮುಖಾಂತರ ತಾನು ಉದ್ಯಮದಲ್ಲಿ ಗಳಿಸಿದ ಸಂಪತ್ತಿನ ಒಂದು ಭಾಗವನ್ನು ಬಡವರಿಗೆ ದಾನ ಮಾಡುವ ಮುಖಾಂತರ ಹಲವು ಶ್ರೀಮಂತ ಉದ್ಯಮಿಗಳಿಗೆ ಮಾದರಿ ಎನಿಸಿದ್ದಾರೆ..




























