ಪುತ್ತೂರು : ಕರ್ನಾಟಕ ವಿಧಾನ ಸಭಾ ಚುನಾವಣೆಯ ಪುತ್ತೂರು ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಅಶೋಕ್ ಕುಮಾರ್ ರೈ ಕೋಡಿಂಬಾಡಿಯವರ ಚುನಾವಣಾ ಕಚೇರಿ ಎ.17 ರಂದು ಪೂಜಾ ವಿಧಿ ವಿಧಾನಗಳೊಂದಿಗೆ ದರ್ಬೆ ಆರ್‌ಇಬಿ ಎಂಕ್ಲೇವ್ ಕಟ್ಟಡದಲ್ಲಿ ಉದ್ಘಾಟನೆಗೊಂಡಿತು.

ಅರ್ಚಕ ಹರಿಪ್ರಸಾದ್ ಬನಾರಿಯವರ ನೇತೃತ್ವದಲ್ಲಿ ಗಣಪತಿ ಹವನ, ಪೂಜಾ ವಿಧಿವಿಧಾನಗಳು ನೆರವೇರಿತು. ಬಳಿಕ ನಡೆದ ಕಾರ್ಯಕ್ರಮದಲ್ಲಿ ಮಾಜಿ ಶಾಸಕಿ ಶಕುಂತಳಾ ಟಿ ಶೆಟ್ಟಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಬಿ ವಿಶ್ವನಾಥ ರೈ, ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ.ರಾಜಾರಾಮ ಕೆ.ಬಿ, ಹಿರಿಯರಾದ ವಲೇರಿಯನ್ ಡಯಾಸ್ ಮೊದಲಾದವರು ದೀಪ ಬೆಳಗಿಸಿ ಉದ್ಘಾಟಿಸಿದರು.

ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ.ರಾಜಾರಾಮ ಕೆ.ಬಿ ಸ್ವಾಗತಿಸಿದರು. ಜಿಲ್ಲಾ ಕಾಂಗ್ರೆಸ್ ವಕ್ತಾರ ಮಹಮ್ಮದ್ ಬಡಗನ್ನೂರು ಕಾರ್ಯಕ್ರಮ ನಿರೂಪಿಸಿದರು.
ಎ.19 ರಂದು ಅಶೋಕ್ ಕುಮಾರ್ ರೈ ಯವರು ನಾಮಪತ್ರ ಸಲ್ಲಿಸಲಿದ್ದಾರೆ..






























