ಪುತ್ತೂರಿನಲ್ಲಿ ಬಿಜೆಪಿ ವಿರುದ್ಧ ಬಂಡಾಯವೆದ್ದಿರುವ ಅರುಣ್ ಪುತ್ತಿಲ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿರುವ ಬಗ್ಗೆ ಪ್ರತಿಕ್ರಿಯಿಸಿದ ಸಂಸದ ನಳಿನ್ ಕುಮಾರ್ ಕಟೀಲ್, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯಾರೂ ಬೇಕಿದ್ದರೂ ಸ್ಪರ್ಧಿಸಬಹುದು. ತಮ್ಮ ಅಪೇಕ್ಷೆ ಈಡೇರದಿದ್ದಾಗ ನಾಮಪತ್ರ ಸಲ್ಲಿಸುತ್ತಾರೆ. ಪುತ್ತೂರು ಬಿಜೆಪಿಯ ಭದ್ರಕೋಟೆ. ಇಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ. ನಮ್ಮ ಕಾರ್ಯಕರ್ತರು ರಾಷ್ಟ್ರೀಯ ವಿಚಾರಧಾರೆ ಜೊತೆ ಕೈ ಜೋಡಿಸುತ್ತಾರೆ ಎಂದರು.
ಬಿಜೆಪಿ ಯಾವುದನ್ನೂ ವಿರೋಧಿಸುವುದಿಲ್ಲ, ನಮಗೆ ಗೆಲುವಾಗಲಿದೆ ಎಂದು ಹೇಳಿದರು.
ಪುತ್ತೂರಿನಲ್ಲಿ ಅರುಣ್ ಪುತ್ತಿಲ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದರಿಂದ ಬಿಜೆಪಿಗೆ ಹಿನ್ನಡೆಯಾಗಲಿದೆ ಎಂದೇ ವಿಶ್ಲೇಷಿಸಲಾಗುತ್ತಿದೆ.
ಈ ಮಧ್ಯೆ, ಪುತ್ತಿಲ ಅವರ ನಾಮಪತ್ರ ಸಲ್ಲಿಕೆ ವೇಳೆ ಸಾವಿರಾರು ಜನ ಸೇರಿರುವುದು ಬಿಜೆಪಿ ಪಾಳಯದಲ್ಲಿ ಆತಂಕ ಮೂಡಿಸಿದೆ ಎನ್ನಲಾಗಿದೆ. ಈ ಎಲ್ಲ ಬೆಳವಣಿಗೆಗಳ ಹಿನ್ನೆಲೆಯಲ್ಲಿ ನಳಿನ್ ಕುಮಾರ್ ಪ್ರತಿಕ್ರಿಯೆ ನೀಡಿದರು..























