ಪುತ್ತೂರು : ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ ರವರು ಚುನಾವಣಾಧಿಕಾರಿ ಗಿರೀಶ್ ನಂದನ್ ರವರಿಗೆ ನಾಮಪತ್ರ ಸಲ್ಲಿಸಿದರು.
ಈ ವೇಳೆ ಹಾಲಿ ಶಾಸಕ ಸಂಜೀವ ಮಠಂದೂರು, ಕರಾವಳಿ ಪ್ರಾಧಿಕಾರದ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ ಸಹಿತ ಪ್ರಮುಖರು ಉಪಸ್ಥಿತರಿದ್ದರು.

ಬೃಹತ್ ಸಂಖ್ಯೆಯ ಕಾರ್ಯಕರ್ತರೊಂದಿಗೆ ಪಾದಯಾತ್ರೆ ಮೂಲಕ ತಾಲೂಕು ಆಡಳಿತ ಸೌಧಕ್ಕೆ ತೆರಳಿ ನಾಮಪತ್ರ ಸಲ್ಲಿಸಲಾಯಿತು.
ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಚಲನಚಿತ್ರ ನಟಿ ಶೃತಿ, ಸಂಸದ ತೇಜಸ್ವಿ ಸೂರ್ಯ, ಬಿಜೆಪಿ ಜಿಲ್ಲಾಧ್ಯಕ್ಷ ಸಹಿತ ಹಲವಾರು ಮಂದಿ ಕೇಂದ್ರ ಮತ್ತು ರಾಜ್ಯದ ನಾಯಕರು, ಸಾವಿರಾರು ಮಂದಿ ಕಾರ್ಯಕರ್ತರು ಪಾದಯಾತ್ರೆಯಲ್ಲಿ ಭಾಗವಹಿಸಿದ್ದರು.
ಗೊಂಬೆ ಕುಣಿತ, ಚೆಂಡೆ, ಶಲ್ಯ ಧರಿಸಿದ ಕಾರ್ಯಕರ್ತರು, ಮಹಿಳೆಯರು, ನಾಸಿಕ್ ಬ್ಯಾಂಡ್ ವಿಶೇಷ ಆಕರ್ಷಣೆಯಾಗಿತ್ತು..


























