ಪುತ್ತೂರು : ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ದಿವ್ಯಪ್ರಭಾ ಚಿಲ್ತಡ್ಕ ಇಂದು ನಾಮಪತ್ರ ಸಲ್ಲಿಸಿದರು.

ಬುಧವಾರ ತನ್ನ ಬೆಂಬಲಿಗರೊಂದಿಗೆ ಮೆರವಣಿಗೆಯಲ್ಲಿ ಸಾಗಿ ನಾಮಪತ್ರ ಸಲ್ಲಿಸುವ ಪ್ರಕಟಣೆ ನೀಡಿದ್ದರು.
ಇಂದು ಬೆಳಿಗ್ಗೆ ಸಹಾಯಕ ಆಯುಕ್ತರ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮುಖಂಡರಾದ ಐ.ಸಿ.ಕೈಲಾಸ್, ಮಹಿಳಾ ಪದಾಧಿಕಾರಿಗಳಾದ ಝೊಹರಾ ನಿಸಾರ್, ಪದ್ಮಾಮಣಿ ಉಪಸ್ಥಿತರಿದ್ದರು.


























