ವಿಟ್ಲ : ಸೌದಿ ಅರೇಬಿಯಾದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ವಿಟ್ಲದ ಯುವಕನೊಬ್ಬ ಮೃತಪಟ್ಟ ಘಟನೆ ವರದಿಯಾಗಿದೆ.
ಮೃತರನ್ನು ಮಹಮ್ಮದ್ ಮುಸ್ಲಿಯಾರ್ ಅಲ್ ಖಾಸಿಮಿ ಎಂಬವರ ಹಿರಿಯ ಪುತ್ರ ಹಬೀಬ್ ಉಕ್ಕುಡ ಎಂದು ತಿಳಿದು ಬಂದಿದೆ.
ಹಬೀಬ್ ಅವರು ಮೂರು ತಿಂಗಳ ಹಿಂದೆಯಷ್ಟೇ ವಿದೇಶಕ್ಕೆ ಕೆಲಸಕ್ಕೆ ತೆರಳಿದ್ದರು.
ಹಬೀಬ್ ಚಲಾಯಿಸುತ್ತಿದ್ದ ಕಾರು ನಿಯಂತ್ರಣ ಕಳೆದುಕೊಂಡು ಕಂಬಕ್ಕೆ ಡಿಕ್ಕಿ ಹೊಡೆದು ರಸ್ತೆಗೆ ಪಲ್ಟಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡ ಹಬೀಬ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.


























