ಪುತ್ತೂರು : ಶ್ರೀ ಮಹಾಲಕ್ಷ್ಮಿ ದೇವಸ್ಥಾನ ಲಕ್ಷ್ಮೀ ದೇವಿ ಬೆಟ್ಟಕ್ಕೆ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಆಶಾ ತಿಮ್ಮಪ್ಪ ಗೌಡ ರವರು ಭೇಟಿ ನೀಡಿದರು.

ಶ್ರೀ ಮಹಾಲಕ್ಷ್ಮೀ ದೇವಸ್ಥಾನ ಲಕ್ಷ್ಮೀ ದೇವಿ ಬೆಟ್ಟದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ ನಡೆಯುತ್ತಿದ್ದು, ಈ ಹಿನ್ನೆಲೆ ಭೇಟಿ ನೀಡಿದ ಆಶಾ ತಿಮ್ಮಪ್ಪ ಗೌಡ ರವರು ದೇವಿಯ ದರ್ಶನ ಪಡೆದು, ಪೂಜೆ ಸಲ್ಲಿಸಿದರು.
ಈ ವೇಳೆ ಹಾಲಿ ಶಾಸಕ ಸಂಜೀವ ಮಠಂದೂರು ಸಹಿತ ಹಲವು ಪ್ರಮುಖರು ಉಪಸ್ಥಿತರಿದ್ದರು.


























