ಬೆಳ್ತಂಗಡಿ : ದ್ವಿಚಕ್ರ ವಾಹನ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿದ ಘಟನೆ ಬೆಳ್ತಂಗಡಿ ತಾಲೂಕಿನ ಕಲ್ಲೇರಿಯಲ್ಲಿ ನಡೆದಿದೆ.
ಘಟನೆಯಲ್ಲಿ ದ್ವಿಚಕ್ರ ವಾಹನ ಸವಾರ ಬೆಳ್ತಂಗಡಿ ತಾಲೂಕು ಕಲೆಂಜಿಬೈಲು ನಿವಾಸಿ ಜಾಫರ್ ಎಂಬವರು ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.
ಗಂಭೀರ ಗಾಯಗೊಂಡ ಜಾಫರ್ ರನ್ನು ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ಕರೆತರಲಾಯಿತಾದರೂ ದಾರಿ ಮಧ್ಯೆ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.

ಮೃತದೇಹವನ್ನು ಸರಕಾರಿ ಆಸ್ಪತ್ರೆಯಲ್ಲಿರಿಸಲಾಗಿದೆ ಎಂದು ವರದಿಯಾಗಿದೆ.

























