ಪುತ್ತೂರು : ವಿಧಾನ ಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ರವರ ಪರವಾಗಿ ಕಾರ್ಯಕರ್ತರು ವಿವಿಧ ದೈವಿಕ ಸನ್ನಿಧಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು.

ಅರುಣ್ ಕುಮಾರ್ ಪುತ್ತಿಲ ರವರು ಪುತ್ತೂರು ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತಿದ್ದು, ಅವರ ಗೆಲುವಿಗಾಗಿ ಕಾರ್ಯಕರ್ತರು ಸವಣೂರು ಬಸದಿಯ ಮಾತೆ ಪದ್ಮಾವತಿ ಸನ್ನಿಧಿಯಲ್ಲಿ ವಿಶೇಷ ಪ್ರಾರ್ಥನೆ ಹಾಗೂ ಹೂವಿನ ಪೂಜೆ ಸೇವೆ, ಶಾಂತಿನಗರ ಮಹಾವಿಷ್ಣು ದೇವಸ್ಥಾನದಲ್ಲಿ ವಿಶೇಷ ಪೂಜೆ ಹಾಗೂ ನೆಕ್ಕಿಲಾಡಿ ಮಹಾವಿಷ್ಣು ದೇವಸ್ಥಾನ ವಿಶೇಷ ಪ್ರಾರ್ಥನೆ ಮತ್ತು ಇತರ ದೈವಿಕ ಕ್ಷೇತ್ರಗಳಲ್ಲಿ ವಿಶೇಷ ಪ್ರಾರ್ಥನೆ, ಪೂಜೆ ಸಲ್ಲಿಸಿದರು.
ಪುತ್ತಿಲ ರವರು ಚುನಾವಣೆಯಲ್ಲಿ ಜಯಗಳಿಸಬೇಕೆಂದು ಚಿಕ್ಕಮುಡ್ನೂರು ಕೊರಗಜ್ಜನ ಸಾನಿಧ್ಯದಲ್ಲಿ ಕಾರ್ಯಕರ್ತರು ಪ್ರಾರ್ಥನೆಯನ್ನು ಸಲ್ಲಿಸಿದರು.

ಹಲವಾರು ಕಾರ್ಯಕರ್ತರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.





























