ಪುತ್ತೂರು : ಜೆಡಿಎಸ್ ಅಭ್ಯರ್ಥಿ ದಿವ್ಯಪ್ರಭಾ ಗೌಡ ರವರು ಮತ ಪ್ರಚಾರಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ದ್ವಿಚಕ್ರ ವಾಹನ ಸ್ಕಿಡ್ ಆಗಿ ಗಾಯಗೊಂಡಿದ್ದವರನ್ನು ಆಸ್ಪತ್ರೆಗೆ ದಾಖಲಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

ಜೆಡಿಎಸ್ ಅಭ್ಯರ್ಥಿ ದಿವ್ಯಪ್ರಭಾ ಗೌಡ ರವರು ಮತ ಪ್ರಚಾರಕ್ಕೆ ತೆರಳುತ್ತಿದ್ದ ವೇಳೆ ಮರೀಲ್ ಬಳಿ ದ್ವಿಚಕ್ರ ವಾಹನ ಸವಾರರೊಬ್ಬರು ಸ್ಕಿಡ್ ಆಗಿ ಗಾಯಗೊಂಡಿದ್ದು, ಕೂಡಲೇ ಸ್ಪಂದಿಸಿದ ದಿವ್ಯಪ್ರಭಾ ರವರು ಖುದ್ದು ಪ್ರಥಮ ಚಿಕಿತ್ಸೆಯನ್ನು ನೀಡಿ ಗಾಯಾಳುವನ್ನು ಆಸ್ಪತ್ರೆಗೆ ದಾಖಲು ಮಾಡಿದರು.





























