ಪುತ್ತೂರು: ಫೇಸ್‌ಬುಕ್‌ನಲ್ಲಿ ಪರಿಚಯವಾದ ಅಪ್ರಾಪ್ತ ವಯಸ್ಕ ಬಾಲಕಿಯನ್ನು ಪುತ್ತೂರಿನಲ್ಲಿ ನಡೆದ ಜಾತ್ರೆಯ ಸಂದರ್ಭ ಭೇಟಿಯಾಗಿ ಆಕೆಯನ್ನು ಪುಸಲಾಯಿಸಿ ಕೆಯ್ಯೂರು ಗ್ರಾಮದ ಮಾಡಾವು ಸಮೀಪ ಅಂಗನವಾಡಿ ವರಾಂಡಕ್ಕೆ ಕರೆದೊಯ್ದು ಅತ್ಯಾಚಾರ ನಡೆಸಿದ ಘಟನೆ ಕುರಿತಂತೆ ಪುತ್ತೂರು ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೆಯ್ಯೂರು ಗ್ರಾಮದ ಮಾಡಾವು ನಿವಾಸಿ ನವೀನ್ ಆರೋಪಿ.
ಕಾಸರಗೋಡು ಮೂಲದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿರುವುದಾಗಿ ಆರೋಪಿಸಿ ದೂರು ನೀಡಲಾಗಿದೆ. ಆರೋಪಿಯ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

























