ಉಪ್ಪಿನಂಗಡಿ : ಪೊಲೀಸ್ ಠಾಣೆ ವ್ಯಾಪ್ತಿಯ ಅಡ್ಡಹೊಳೆಯ ಪೆಟ್ರೋಲ್ ಪಂಪ್ ಬಳಿ ರಸ್ತೆಯಲ್ಲಿ ಹೋಗುತ್ತಿದ್ದ ಆಟೋ ರಿಕ್ಷಾ ಚಾಲಕ ಹಾಗೂ ಕೇರಳ ನೋಂದಣಿಯ ಕಾರಿನಲ್ಲಿ ಬಂದ ವ್ಯಕ್ತಿಗಳ ನಡುವೆ ವಾಹನ ಓವರ್ ಟೇಕ್ ಮಾಡುವ ವಿಚಾರಕ್ಕೆ ಜಗಳ ನಡೆದ ಘಟನೆ ನಡೆದಿದೆ.

ಕಾರಿನಲ್ಲಿ ಬಂದಿದ್ದ ವ್ಯಕ್ತಿಗಳು ಆಟೋ ಚಾಲಕನಿಗೆ ಹಲ್ಲೆ ಮಾಡಿ ಪರಿಯಾಗಿದ್ದು, ಹಲ್ಲೆಯಿಂದ ಆಟೋ ಚಾಲಕ ಗಾಯಗೊಂಡಿದ್ದಾರೆ.
ಪೇರಮಜಲು ವಿಶ್ವನಾಥ್ ಗಾಯಗೊಂಡವರು.
ಈ ಬಗ್ಗೆ ಕಾರಿನಲ್ಲಿ ಬಂದಿದ್ದ ಅಪರಿಚಿತ ವ್ಯಕ್ತಿಗಳ ಮೇಲೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಆಟೋ ಚಾಲಕ ವಿಶ್ವನಾಥ್ ಪುತ್ತೂರು ಆಸ್ಪತ್ರೆಯಲ್ಲಿ ದಾಖಲಾಗಿದ್ದು, ಆಸ್ಪತ್ರೆಗೆ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಅವರು ಭೇಟಿ ನೀಡಿ ಗಾಯಾಳುವನ್ನು ವಿಚಾರಿಸಿದರು.























