ಪುತ್ತೂರು : ಕಾಲೇಜು ವಿದ್ಯಾರ್ಥಿನಿಯರ ಜೊತೆ ಜ್ಯೂಸ್ ಕುಡಿಯುತ್ತಿದ್ದ ವಿದ್ಯಾರ್ಥಿಗೆ ಆಟೋ ಚಾಲಕ ಮತ್ತು ಆತನ ಸ್ನೇಹಿತರು ಹಲ್ಲೆ ನಡೆಸಿದ ಘಟನೆ ಪುತ್ತೂರು ಬಸ್ ನಿಲ್ದಾಣದ ಬಳಿ ನಡೆದಿದೆ.
ಕೆಮ್ಮಿಂಜೆ ನಿವಾಸಿ ಮಹಮ್ಮದ್ ಫಾರಿಸ್ ಗಾಯಗೊಂಡ ವಿದ್ಯಾರ್ಥಿ.
ಹಲ್ಲೆಗೊಳಗಾಗಿರುವ ಮಹಮ್ಮದ್ ಫಾರಿಸ್ ಪುತ್ತೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ಸಂಖ್ಯೆ 32/2023 ಕಲಂ 143,147,148,365,504,324,506 r/w 34 ಐಪಿಸಿ ರಂತೆ ಸದರಿ ಆರೋಪಿತರ ಮೇಲೆ ಪ್ರಕರಣ ದಾಖಲಿಸಲಾಗಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ದಸ್ತಗಿರಿ ಮಾಡಿ ತನಿಖೆಕೈಗೊಳ್ಳಲಾಗಿದೆ ಎಂದು ತಿಳಿದು ಬಂದಿದೆ.
























