ಪುತ್ತೂರು : ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಕೋಡಿಂಬಾಡಿ ರವರು ನಗರಸಭೆ ಮಾಜಿ ಅಧ್ಯಕ್ಷ, ಕಾಂಗ್ರೆಸ್ ಮುಖಂಡ ನೆಲ್ಲಿಕಟ್ಟೆ ಜಗದೀಶ್ ಶೆಟ್ಟಿ ರವರನ್ನು ಭೇಟಿ ಮಾಡಿದರು.

ಜಗದೀಶ್ ಶೆಟ್ಟಿ ರವರನ್ನು ಭೇಟಿಯಾದ ಅಶೋಕ್ ರೈ ರವರು ತಮಗೆ ಬೆಂಬಲ ನೀಡುವಂತೆ ಮನವಿ ಮಾಡಿದ್ದು, ತಮ್ಮ ಸಂಪೂರ್ಣ ಬೆಂಬಲ ನೀಡುವುದಾಗಿ ಜಗದೀಶ್ ಶೆಟ್ಟಿ ರವರು ತಿಳಿಸಿರುವುದಾಗಿ ತಿಳಿದು ಬಂದಿದೆ.
ಈ ವೇಳೆ ಸಿಝ್ಲರ್ ಪ್ರಸನ್ನ ಕುಮಾರ್ ಶೆಟ್ಟಿ ಸಹಿತ ಹಲವು ಕಾಂಗ್ರೆಸ್ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.























