ಪುತ್ತೂರು : ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ರವರು ಕೆಲ ವರುಷಗಳ ಹಿಂದೆ ಹತ್ಯೆಯಾದ ಕಬಕ ವಡ್ಯ ನಿವಾಸಿ ಸೌಮ್ಯ ಭಟ್ ರವರ ಮನೆಗೆ ಭೇಟಿ ನೀಡಿ ಅವರ ತಾಯಿಯ ಆಶೀರ್ವಾದ ಪಡೆದರು.

ಹಲವು ವರುಷಗಳ ಹಿಂದೆ ನಡೆದ ಸೌಮ್ಯ ಭಟ್ ಕೊಲೆ ಪ್ರಕರಣದಲ್ಲಿ ಪುತ್ತಿಲ ರವರು ಸಾಕಷ್ಟು ಹೋರಾಟ ನಡೆಸಿದ್ದರು.
1997 ಆಗಸ್ಟ್ 7ರಂದು ಪುತ್ತೂರು ವಿವೇಕಾನಂದ ಕಾಲೇಜಿನ ಅಂತಿಮ ವರ್ಷದ ಬಿಎಸ್ ಸಿ ವಿದ್ಯಾರ್ಥಿನಿ ಸೌಮ್ಯಳ ಹತ್ಯೆ ನಡೆದಿತ್ತು.
ಆಶ್ರಫ್ ಎಂಬಾತ ಆಕೆಯನ್ನು ಅಮಾನುಷವಾಗಿ ಹತ್ಯೆ ಮಾಡಿದ್ದ. ಪ್ರಕರಣದ ಬಳಿಕ ಪುತ್ತೂರಿನಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಆಕೆಯನ್ನು ಬರ್ಬರವಾಗಿ ಕೊಲೆಗೈದ ಆರೋಪಿ ಪತ್ತೆಗಾಗಿ ಹೋರಾಟ ನಡೆದಿತ್ತು. ಈ ಹೋರಾಟದಲ್ಲಿ ಅರುಣ್ ಕುಮಾರ್ ಪುತ್ತಿಲ ರವರು ಭಾಗಿಯಾಗಿದ್ದು, ಸೌಮ್ಯ ಭಟ್ ಸಾವಿಗೆ ನ್ಯಾಯ ಸಿಗಬೇಕೆಂದು ಹಲವಾರು ಪ್ರಯತ್ನಗಳನ್ನು ನಡೆಸಿದ್ದರು.























