ಪುತ್ತೂರು : ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ರವರ ಬೃಹತ್ ರೋಡ್ ಶೋ ಇಂದು ಬೊಳುವಾರಿನಿಂದ ದರ್ಬೆ ವೃತ್ತದ ವರೆಗೆ ನಡೆಯಿತು.

ನಿಕೇತ್ ರಾಜ್, ಮಾಜಿ ಶಾಸಕಿ ಶಕುಂತಲಾ ಶೆಟ್ಟಿ, ಮಾಜಿ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷ ಎಂ.ಎಸ್. ಮೊಹಮ್ಮದ್, ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಅಧ್ಯಕ್ಷ ಡಾ. ರಾಜರಾಮ್ ಕೆ.ಬಿ., ಪುತ್ತೂರು ಬ್ಲಾಕ್ ಅಧ್ಯಕ್ಷ ಎಂ.ಬಿ ವಿಶ್ವನಾಥ್ ರೈ, ಮಹಮ್ಮದ್ ಆಲಿ, ಹೇಮಾನಾಥ್ ಶೆಟ್ಟಿ ಕಾವು ಸಹಿತ ಕಾಂಗ್ರೆಸ್ ಮುಖಂಡರು ಪಾಲ್ಗೊಂಡಿದ್ದರು.

ಸಾವಿರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು..































