ಮಂಗಳೂರು: ನಗರದ ಪ್ರತಿಷ್ಠಿತ ವಿದ್ಯಾಸಂಸ್ಥೆಯಲ್ಲೊಂದಾದ ವಳಚ್ಚಿಳ್ ನ ಎಕ್ಸ್ ಪರ್ಟ್ ಕಾಲೇಜು ವಿರುದ್ಧ ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಎಕ್ಸ್ ಪರ್ಟ್ ವಿದ್ಯಾಂಸ್ಥೆಯು ಕೋವಿಡ್ ನಿಯಮ ಉಲ್ಲಂಘಿಸಿ ತಮ್ಮ ಶೈಕ್ಷಣಿಕ ಚಟುವಟಿಕೆ ನಡೆಸಿರುವುದು ಬೆಳಕಿಗೆ ಬಂದಿದೆ. ಎಪ್ರಿಲ್ 19 ರಂದು ಸುಮಾರು 30 ವಿದ್ಯಾರ್ಥಿಗಳನ್ನು ಸಂಸ್ಥೆಯಲ್ಲೇ ಇರಿಸಿಕೊಂಡಿದ್ದು, ಪೋಷಕರು ವಿದ್ಯಾರ್ಥಿಗಳನ್ನು ತಮ್ಮ ಊರಿಗೆ ಕರೆದುಕೊಂಡು ಹೋಗಲು ದೂರದ ಊರಿಂದ ಬಂದಿದ್ದಾರೆ.
ಆದ್ರೆ ಶಿಕ್ಷಣ ಸಂಸ್ಥೆಯವರು ವಿದ್ಯಾರ್ಥಿಗಳನ್ನು ಪೋಷಕರೊಂದಿಗೆ ಕಳುಹಿಸದೆ, ರಾಜ್ಯದಲ್ಲಿ ಕೋವಿಡ್ ಟಫ್ ರೂಲ್ಸ್ ಮಾಡಿದ್ದರೂ ಶೈಕ್ಷಣಿಕ ಚಟುವಟಿಕೆ ನಡೆಸಿ ಕೋವಿಡ್ ಸಾಂಕ್ರಾಮಿಕ ರೋಗ ಹರಡಲು ಕಾರಣರಾಗಿದ್ದಾರೆ. ಹಾಗಾಗಿ ಸರ್ಕಾರದ ಆದೇಶ ಉಲ್ಲಂಘಣೆಯಾಗಿರುವುದರಿಂದ ವಿದ್ಯಾಸಂಸ್ಥೆಯ ಮುಖ್ಯಸ್ಥ ನರೇಂದ್ರ ನಾಯಕ್ ಮತ್ತು ಆಡಳಿತ ಮಂಡಳಿ ವಿರುದ್ಧ ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ 5(1), 5(4) ಕರ್ನಾಟಕ ಸಾಂಕ್ರಾಮಿಕ ರೋಗ ತಡೆ ಕಾಯ್ದೆ ಅನ್ವಯ ಪ್ರಕರಣ ದಾಖಲಾಗಿದೆ.