ರಾಜ್ಯದಲ್ಲಿ ಕರ್ನಾಟಕ ಹಾಲು ಒಕ್ಕೂಟದ ನಂದಿನಿ ಹಾಲಿನ ಮಳಿಗೆಗಳನ್ನು ಶುಕ್ರವಾರದಿಂದ (ಏ.30)ಬೆಳಿಗ್ಗೆ 6 ರಿಂದ ರಾತ್ರಿ 8ರವರೆಗೆ ತೆರೆಯಲು ಆದೇಶ ನೀಡಲಾಗಿದೆ.ಈ ಕುರಿತು ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ್ ಪರಿಷ್ಕೃತ ಆದೇಶ ಹೊರಡಿಸಿದ್ದಾರೆ.
ರಾಜ್ಯದಲ್ಲಿ ಕೋವಿಡ್ ಕರ್ಫ್ಯೂ ಹಿನ್ನೆಲೆಯಲ್ಲಿ ಬೆಳಿಗ್ಗೆ 6-10ವರೆಗೆ ಅಗತ್ಯ ವಸ್ತುಗಳ ಖರೀದಿಗೆ ಮಾತ್ರ ಅವಕಾಶ ನೀಡಲಾಗಿದೆ. ಆದರೆ ಹಾಲು ಮಾರಾಟ ಮಾಡಲು ಸಮಸ್ಯೆಯಾಗುತ್ತಿರುವುದರಿಂದ ಸಂಜೆ 8 ಗಂಟೆವರೆಗೂ ನಂದಿನಿ ಹಾಲಿನ ಮಳಿಗೆಗಳನ್ನು ತೆರೆದಿಡಲು ಅವಕಾಶ ಕಲ್ಪಿಸಿ ಆದೇಶ ಹೊರಡಿಸಿದ್ದಾರೆ.