ವಿಟ್ಲ : ಗ್ಯಾಸ್ ಏಜೆನ್ಸಿಯಲ್ಲಿ ಕೆಲಸ ನಿರ್ವಹಿಸುವ ವ್ಯಕ್ತಿಯೋರ್ವರಿಗೆ ಅನ್ಯಕೋಮಿನ ವ್ಯಕ್ತಿಯೋರ್ವ ತಂಡದೊಂದಿಗೆ ಹಲ್ಲೆ ನಡೆಸಿದ ಘಟನೆ ವಿಟ್ಲದಲ್ಲಿ ನಡೆದಿದ್ದು, ಈ ಬಗ್ಗೆ ವಿಟ್ಲ ಠಾಣೆಗೆ ದೂರು ನೀಡಲಾಗಿದೆ.

ವಿಟ್ಲ ಮೇಗಿನಪೇಟೆಯಲ್ಲಿ ಸಾಯಿ ಇಂಡಿಯನ್ ಗ್ಯಾಸ್ ಏಜೆನ್ಸಿಯಲ್ಲಿ ಕೆಲಸ ನಿರ್ವಹಿಸುವ ವ್ಯಕ್ತಿಯೋರ್ವರು ಕಮರ್ಷಿಯಲ್ ಗ್ಯಾಸ್ ಅನ್ನು ಅಂಗಡಿಗಳಿಗೆ ಕೊಂಡೊಯ್ಯುತ್ತಿದ್ದ ವೇಳೆ ಅನ್ಯಕೋಮಿನ ವ್ಯಕ್ತಿಯೋರ್ವ ಮೊನ್ನೆ ಯಾಕೆ ಗ್ಯಾಸ್ ಹಾಕಿಲ್ಲವೆಂದು ಗಲಾಟೆ ನಡೆಸಿದ್ದು, ಈ ವೇಳೆ ಅವರು ನಿನ್ನೆ ಮೊನ್ನೆಯೆಲ್ಲಾ ರಜೆ ಇತ್ತು ಹಾಗಾಗಿ ಗ್ಯಾಸ್ ಹಾಕಿಲ್ಲವೆಂದು ಹೇಳಿದ್ದು, ಆಗ ಆತ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದ್ದು, ಆತನೊಂದಿಗಿದ್ದವರು ಹಲ್ಲೆ ನಡೆಸಿರುವುದಾಗಿ ತಿಳಿಸಿದ್ದಾರೆ.
ಹಲ್ಲೆಗೊಳಗಾದ ವ್ಯಕ್ತಿ ವಿಟ್ಲ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದು, ವಿಟ್ಲ ಠಾಣೆಗೆ ದೂರು ನೀಡಿರುವುದಾಗಿ ತಿಳಿದು ಬಂದಿದೆ..
























