ಪುತ್ತೂರು : ಕೆಎಸ್ಆರ್‌ಟಿಸಿ ಬಸ್ ನಿಲ್ದಾಣದ ಬಳಿ ಇರುವ ಅರಣ್ಯ ಇಲಾಖೆಯ ಆವರಣಗೋಡೆಯ ಎದುರು ಬಿಜೆಪಿ ನಾಯಕರಾಗಿರುವ ಮಾಜಿ ಸಿಎಂ ಸದಾನಂದ ಗೌಡ ಹಾಗೂ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ರವರ ಭಾವಚಿತ್ರ ವಿರುವ ಬ್ಯಾನರ್ ನಲ್ಲಿ ಭಾವಪೂರ್ಣ ಶ್ರದ್ದಾಂಜಲಿ ಎಂದು ಬರೆದು ಚಪ್ಪಲಿ ಹಾರ ಹಾಕಲಾಗಿರುವ ಪ್ರಕರಣಕ್ಕೆ ಸಂಬಂಧಿಸಿ ಏಳು ಮಂದಿ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಅಭಿ (ಅವಿನಾಶ್), ಶಿವರಾಮ್, ಚೈತ್ರೇಶ್, ಈಶ್ವರ್, ನಿಶಾಂತ್, ದೀಕ್ಷಿತ್, ಗುರುಪ್ರಸಾದ್ ಪೊಲೀಸ್ ವಶಕ್ಕೆದಲ್ಲಿರುವವರು.
ಇನ್ನು ಬ್ಯಾನರ್ ಅಳವಡಿಸಿದ ಪ್ರಕರಣಕ್ಕೆ ಸಂಬಂಧಿಸಿ ತನಿಖೆ ನಡೆಸಿ ಕಾರ್ಯಾಚರಣೆ ನಡೆಸಿದ ಪೊಲೀಸರು ಮೇ 15 ಸಂಜೆ ನರಿಮೊಗರು ನಿವಾಸಿಗಳಾದ ವಿಶ್ವನಾಥ್ ಮತ್ತು ಮಾಧವ ಎಂಬವರನ್ನು ವಶಕ್ಕೆ ಪಡೆದುಕೊಂಡಿದ್ದರು. ವಿಚಾರಣೆ ವೇಳೆ ಅವರೊಂದಿಗೆ ಇನ್ನೂ ಹಲವರಿದ್ದರು ಎಂಬ ಮಾಹಿತಿ ಮೇರೆಗೆ ಪತ್ತೆ ಕಾರ್ಯ ನಡೆಸಿದ ಪೊಲೀಸರು ತಡರಾತ್ರಿ 7 ಮಂದಿಯನ್ನು ವಶಕ್ಕೆ ಪಡೆದುಕೊಂಡರು. ಇನ್ನೂ ಇಬ್ಬರು ತಲೆಮರೆಸಿಕೊಂಡಿರುವುದಾಗಿ ತಿಳಿದು ಬಂದಿದೆ.
























