ಪುತ್ತೂರು : ಸರ್ಕಾರಿ ಬಸ್ ನಿಲ್ದಾಣದ ಮುಂಭಾಗ ಬಿಜೆಪಿ ನಾಯಕರ ಫೋಟೋವಿದ್ದ ಬ್ಯಾನರ್ ಗೆ ಚಪ್ಪಲಿ ಹಾರ ಹಾಕಿದ ಪ್ರಕರಣದಲ್ಲಿ ಯುವಕರನ್ನು ವಶಕ್ಕೆ ಪಡೆದ ಪೊಲೀಸರು ಅವರಿಗೆ ಥಳಿಸಿ ದೌರ್ಜನ್ಯ ಎಸಗಿದ್ದಾರೆಂಬ ಆರೋಪ ಕೇಳಿ ಬರುತ್ತಿದ್ದು, ಈ ಘಟನೆಯನ್ನು ಹಿಂದು ಜಾಗರಣ ವೇದಿಕೆ ತೀವ್ರವಾಗಿ ಖಂಡಿಸಿದೆ.
ಬ್ಯಾನರ್ ಪ್ರಕರಣದ ಹೆಸರಿನಲ್ಲಿ ಪೊಲೀಸರು ಯುವಕರ ಮೇಲೆ ಮಾರಾಣಾಂತಿಕ ಹಲ್ಲೆ ಮಾಡಿರುವುದು., ಅಮಾನವೀಯವಾಗಿ ವರ್ತಿಸಿರುವುದು ಖಂಡನೀಯ ಮತ್ತು ಈ ಬಗ್ಗೆ ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕೂಡಲೇ ಕ್ರಮಕೈಗೊಳ್ಳಬೇಕು.
ಘಟನೆಯ ಸತ್ಯಾಂಶದ ಬಗ್ಗೆ ತನಿಖೆ ನಡೆಸಿ ಸಂಬಂಧಪಟ್ಟ ಅಧಿಕಾರಿಗಳನ್ನು 24 ಗಂಟೆಯೊಳಗೆ ಅಮಾನತುಗೊಳಿಸಬೇಕೆಂದು ಹಿಂದು ಜಾಗರಣ ವೇದಿಕೆ ಆಗ್ರಹಿಸಿದೆ.


























