ಪುತ್ತೂರು : ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ರವರು ಮುಖ್ಯಮಂತ್ರಿ ಸಿದ್ದರಾಮಯ್ಯ ರವರ ವಿರುದ್ಧ ಸುಳ್ಳು ಆರೋಪ ಮಾಡಿದ್ದು, ಈ ಬಗ್ಗೆ ತನಿಖೆ ನಡೆಸುವಂತೆ ಪುತ್ತೂರು ನಗರಸಭಾ ಸದಸ್ಯ ಮಹಮ್ಮದ್ ರಿಯಾಜ್ ಪುತ್ತೂರು ನಗರ ಠಾಣೆಗೆ ದೂರು ನೀಡಿದ್ದಾರೆ.

ಕರ್ನಾಟಕದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ರವರು 24 ಜನರನ್ನು ಹತ್ಯೆ ಮಾಡಿರುತ್ತಾರೆ ಎಂಬುದಾಗಿ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜಾ ರವರು ಮೇ.22 ರಂದು ನಡೆದ ಭಾರತೀಯ ಜನತಾ ಪಾರ್ಟಿಯ ವಿಜಯೋತ್ಸವದ ಸಂದರ್ಭದಲ್ಲಿ ಹೇಳಿರುತ್ತಾರೆ. ಈ ಬಗ್ಗೆ ವಿಡಿಯೋ ಚಿತ್ರಣವು ಇದ್ದು., ಮುಖ್ಯಮಂತ್ರಿಗಳ ವಿರುದ್ಧ ಈ ರೀತಿ ಆರೋಪ ಮಾಡಿರುವುದು ಸರಿಯಲ್ಲ. ಆದುದರಿಂದ ಪರಿಶೀಲನೆ ಮಾಡಿ ವಿನಾಕಾರಣ ಆರೋಪ ಮಾಡಿರುವ ಹರೀಶ್ ಪೂಂಜಾ ರನ್ನು ತನಿಖೆ ನಡೆಸಿ.., ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಪುತ್ತೂರು ಬ್ಲಾಕ್ ಕಾಂಗ್ರೆಸ್ ನ ಕಾರ್ಯದರ್ಶಿ ರೋಷನ್ ರೈ ಬನ್ನೂರು, ಯುವ ಕಾಂಗ್ರೆಸ್ ನ ನಗರಾಧ್ಯಕ್ಷರಾದ ಮೋನು ಬಪ್ಪಳಿಗೆ ಉಪಸ್ಥಿತರಿದ್ದರು.

























