ಬೆಂಗಳೂರು: ರಾಜ್ಯದಲ್ಲಿ ಅಧಿಕಾರ ಹಂಚಿಕೆ ಇಲ್ಲ, ಸಿದ್ದರಾಮಯ್ಯ ಪೂರ್ಣವಧಿ ಮುಖ್ಯಮಂತ್ರಿ ಆಗಲಿದ್ದಾರೆ ಎಂಬ ಸಚಿವ ಎಂಬಿ ಪಾಟೀಲ್ ಹೇಳಿಕೆ ಕಾಂಗ್ರೆಸ್ನಲ್ಲಿ ಸಂಚಲನ ಸೃಷ್ಟಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಬಣಗಳ ನಡುವೆ ಶೀತಲ ಸಮರಕ್ಕೆ ಕಾರಣವಾಗಿದೆ. ಇದರ ಬೆನ್ನಲ್ಲೇ ಪಾಟೀಲ್ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿರುವ ಕಾಂಗ್ರೆಸ್ ಹೈಕಮಾಂಡ್, ಅಧಿಕಾರ ಹಂಚಿಕೆ ಸೂತ್ರದ ಬಗ್ಗೆ ಯಾರೂ ಚರ್ಚಿಸಬಾರದು ಎಂದು ಖಡಕ್ ಎಚ್ಚರಿಕೆ ನೀಡಿದೆ.
ಯಾರೂ ಕೂಡ ಅನಗತ್ಯ ಹೇಳಿಕೆಗಳನ್ನು ನೀಡಬಾರದು. ಒಳ್ಳೆಯ ಆಡಳಿತ ನೀಡುವುದಷ್ಟೇ ಈಗ ನಮ್ಮ ಆದ್ಯತೆ. ಇದರ ಕಡೆಗೆ ಗಮನ ಕೊಡಬೇಕು. ಇದರ ಹೊರತಾಗಿ ಅನಗತ್ಯ ಹೇಳಿಕೆಗಳನ್ನು ನೀಡಬಾರದು ಎಂದು ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಎಚ್ಚರಿಕೆ ನೀಡಿದ್ದಾರೆ.
ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಬಣದ ಸಚಿವರು, ಶಾಸಕರಿಗೆ ಸ್ಪಷ್ಟ ಸೂಚನೆ ನೀಡಿದ್ದಾರೆ.


























