ಪುತ್ತೂರು; ಅವಿವಾಹಿತ ಯುವಕನೋರ್ವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಬಗ್ಗೆ ನಿಡ್ಪಳ್ಳಿ ಗ್ರಾಮದ ಪೊಯ್ಯೆತ್ತಡ್ಕ ಎಂಬಲ್ಲಿ ವರದಿಯಾಗಿದೆ.
ನಿಡ್ಪಳ್ಳಿ ಪೊಯ್ಯೆತ್ತಡ್ಕ ಐತ್ತಪ್ಪ ನಾಯ್ಕರವರ ಪುತ್ರ ವಿಶ್ವನಾಥ ಮೃತಪಟ್ಟವರಾಗಿದ್ದಾರೆ. ಕೂಲಿ ಕಾರ್ಮಿಕರಾಗಿರುವ ವಿಶ್ವನಾಥರವರ ಮನೆಯ ಸಮೀಪದಲ್ಲಿರುವ ಕಟ್ಟಡದ ಹೊರ ಜಗಲಿಯ ಪಕ್ಕಾಸಿಗೆ ನೈಲಾನ್ ಹಗ್ಗದಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಮುಂಜಾನೆ ಪತ್ತೆಯಾಗಿದೆ.
ತಲೆಯಲ್ಲಿ ಮುಂಡಾಸು ಕಟ್ಟಿದ ಹಾಗೆಯೇ ಇರುವುದಲ್ಲದೆ ಕೈಗಳು ಕಟ್ಟಡದ ಕಂಬಕ್ಕೆ ತಾಗು ರೀತಿಯಲ್ಲಿತ್ತು. ಅಲ್ಲದೆ ಕಾಲು ನೆಲಕ್ಕೆ ತಾಗುವ ರೀತಿಯಲ್ಲಿದ್ದು ಈ ಸಾವಿನ ಕುರಿತು ಸಾರ್ವಜನಿಕರು ಅನುಮಾನ ವ್ಯಕ್ತಪಡಿಸಿದ್ದಾರೆ. ಘಟನಾ ಸ್ಥಳಕ್ಕೆ ಸಂಪ್ಯ ಪೊಲೀಸರು ಅಗಮಿಸಿ ತನಿಖೆ ನಡೆಸುತ್ತಿದ್ದಾರೆ.