ಕಾಂಗ್ರೇಸ್ ಕಾರ್ಯಕರ್ತರಿಂದ ಮಾರಣಾಂತಿಕವಾಗಿ ಹಲ್ಲೆಗೊಳಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಭಜರಂಗದಳ ಕಾರ್ಯಕರ್ತ ಹಾಗೂ ಬಿಜೆಪಿ ಕಾರ್ಯಕರ್ತರನ್ನು ಸಂಸದ ನಳಿನ್ ಕುಮಾರ್ ಕಟೀಲು ಹಾಗೂ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಬೇಟಿ ನೀಡಿ ಆರೋಗ್ಯ ವಿಚಾರಿಸಿದರು.
ಮಧ್ಯಾಹ್ನದ ವೇಳೆ ಮಾಣಿ ಎಂಬಲ್ಲಿ ಓಮ್ನಿ ಕಾರಿನಲ್ಲಿ ಬಂದ ಕಾಂಗ್ರೆಸ್ ಕಾರ್ಯಕರ್ತರು ಸ್ಕೂಟರ್ ನಲ್ಲಿ ಸಂಚರಿಸುತ್ತಿದ್ದ ಭಜರಂಗದಳ ಕಾರ್ಯಕರ್ತ ಮಹೇಂದ್ರ ಎಂಬವನಿಗೆ ಡಿಕ್ಕಿ ಹೊಡೆದು ಬಳಿಕ ಕಟ್ಟಿಗೆಯಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿತ್ತು.
ಗಂಭೀರವಾಗಿ ಹಲ್ಲೆಗೊಳಗಾದ ಮಹೇಂದ್ರ ಆತನ ಸ್ನೇಹಿತ ಪ್ರಶಾಂತ್ ನಾಯ್ಕ್ ಅವರನ್ನು ಕೂಡಲೇ ಪುತ್ತೂರು ಆದರ್ಶ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಶಾಸಕ ರಾಜೇಶ್ ನಾಯ್ಕ್
ವಿಧಾನ ಸಭಾ ಅಧಿವೇಶನದಲ್ಲಿ ಭಾಗಿಯಾಗಿದ್ದ ಶಾಸಕರಿಗೆ ಈ ವಿಚಾರ ತಿಳಿದ ಕೂಡಲೇ ಮಂಗಳೂರು ಪೋಲೀಸ್ ವರಿಷ್ಢಾಧಿಕಾರಿಯನ್ನು ಪೋನ್ ಮುಖಾಂತರ ಸಂಪರ್ಕ ಮಾಡಿ ಆರೋಪಿಗಳನ್ನು ತಕ್ಷಣ ಬಂಧಿಸಿ ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದೇನೆ ಅವರು ತಿಳಿಸಿದ್ದಾರೆ.

























