ಪುತ್ತೂರು : ಪ್ರವೀಣ್ ನೆಟ್ಟಾರು ರವರ ಪತ್ನಿ ನೂತನ ಕುಮಾರಿ ರವರನ್ನು ಕೆಲಸದಿಂದ ಬಿಡುಗಡೆಗೊಳಿಸಿ ಆದೇಶ ಹೊರಡಿಸಲಾಗಿದೆ ಎಂಬ ವಿಚಾರ ಈಗಾಗಲೇ ಸುದ್ದಿಯಾಗುತ್ತಿದ್ದು, ಈ ಬಗ್ಗೆ ಪುತ್ತೂರು ಶಾಸಕರಾದ ಅಶೋಕ್ ರೈ ರವರು ಪ್ರತಿಕ್ರಿಯಿಸಿದ್ದಾರೆ.
ಪ್ರವೀಣ್ ನೆಟ್ಟಾರು ಪತ್ನಿ ನೂತನ ಕುಮಾರಿ ರವರನ್ನು ಕೆಲಸದಿಂದ ವಜಾಗೊಳಿಸಿ ಆದೇಶ ಹೊರಡಿಸಲಾಗಿದೆ ಎಂಬ ಬಗ್ಗೆ ಮಾಧ್ಯಮ ವರದಿಯನ್ನು ನೋಡಿದ ಬಳಿಕ ನನಗೆ ತಿಳಿದಿದ್ದು, ಈ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ರವರ ಜೊತೆ ಮಾತನಾಡುವುದಾಗಿ ಅವರು ತಿಳಿಸಿದರು.
ಹಿಂದಿನ ಬಿಜೆಪಿ ಸರಕಾರ ಸರಿಯಾದ ರೀತಿ ನೇಮಕಾತಿ ಮಾಡಿಕೊಳ್ಳದೆ ಪ್ರಸಕ್ತ ಮುಖ್ಯಮಂತ್ರಿ ಇರುವ ತನಕ ಇಲ್ಲವೇ ಮುಂದಿನ ಆದೇಶದವರೆಗೆ ಎಂದು ನಮೂದಿಸಿದ್ದು,ಇದು ಬಿಜೆಪಿ ಸರಕಾರದ ತಪ್ಪಾಗಿದೆ.
ನಾನು ಈ ಬಗ್ಗೆ ಕೂಡಲೇ ಮುಖ್ಯಮಂತ್ರಿಯವರಲ್ಲಿ ಮಾತನಾಡಿದ ಶೀಘ್ರ ಮರು ನೇಮಕಾತಿ ಬಗ್ಗೆ ಪ್ರಸ್ತಾಪಿಸುವುದಾಗಿ ಅವರು ತಿಳಿಸಿದರು..




























