ವಿಟ್ಲ : ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲ ಅಳಕೆಮಜಲು ಸಮೀಪ ನಡೆದಿದೆ.
ಅಳಕೆಮಜಲು ನಿವಾಸಿ ಧೀರಜ್ (30) ಮೃತರು.

ಧೀರಜ್ ಬಿ.ಸಿ.ರೋಡ್ ನ ಹೋಂಡಾ ಶೋ ರೂಂ ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ಒಂದು ವರುಷದ ಹಿಂದಷ್ಟೇ ವಿವಾಹವಾಗಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಮೃತರು ತಂದೆ, ತಾಯಿ, ಪತ್ನಿ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.
























