ಬಂಟ್ವಾಳ : ಕೆಲಸಕ್ಕೆಂದು ತೆರಳಿದ್ದ ಯುವತಿ ನಾಪತ್ತೆಯಾಗಿರುವ ಕುರಿತು ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಂಟ್ವಾಳ ತಾಲೂಕು ವೀರಕಂಭ ಗ್ರಾಮದ ಮಜಿ ನಿವಾಸಿ ಬಾಲಕೃಷ್ಣರವರ ಪುತ್ರಿ ಶ್ರೀದೇವಿ (23) ನಾಪತ್ತೆಯಾದವರು.

ಶ್ರೀದೇವಿ ರವರು ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ವಿಟ್ಲ ವಲಯದ ಸೇವಾ ಪ್ರತಿನಿಧಿಯಾಗಿ ಕೆಲಸ ಮಾಡಿಕೊಂಡಿದ್ದು, ಜೂ.9 ರಂದು ಬಂಟ್ವಾಳ ತಾಲೂಕು ವೀರಕಂಭ ಗ್ರಾಮದ ಮಜಿ ಎಂಬಲ್ಲಿರುವ ಮನೆಯಿಂದ ಎಂದಿನಂತೆ ಕೆಲಸಕ್ಕೆ ಹೋಗಿ ಬರುವುದಾಗಿ ವಿಟ್ಲಕ್ಕೆ ಹೋದವರು ಸಾಯಂಕಾಲವಾದರೂ ಮನೆಗೆ ಬಾರದೆ ನಾಪತ್ತೆಯಾಗಿದ್ದಾರೆ. ಈ ವೇಳೆ ಶ್ರೀದೇವಿಯವರ ಮೊಬೈಲ್ ಗೆ ಕರೆ ಮಾಡಿದಾಗ ಮೊಬೈಲ್ ಸ್ವಿಚ್ ಆಫ್ ಆಗಿತ್ತು. ಆಕೆಯ ಪತ್ತೆಗಾಗಿ ಸಂಬಂಧಿಕರ ಮನೆ ಸಹಿತ ವಿವಿಧೆಡೆ ಹುಡುಕಾಟ ನಡೆಸಲಾಗಿತ್ತಾದರೂ ಆಕೆ ಪತ್ತೆಯಾಗಿಲ್ಲ ಎಂದು ಶ್ರೀದೇವಿ ರವರ ತಂದೆ ಬಾಲಕೃಷ್ಣ ರವರು ವಿಟ್ಲ ಪೊಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.
ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ವಿಟ್ಲ ಠಾಣಾ ಪೊಲೀಸರು ಪತ್ತೆ ಕಾರ್ಯ ನಡೆಸುತ್ತಿದ್ದಾರೆ.

























