ಪುತ್ತೂರು : ಪಾಲ್ತಾಡಿ ಗ್ರಾಮದ ತಮ್ಮ ಮೂಲ ತರವಾಡು ಮನೆ ಕುಂಜಾಡಿಯಲ್ಲಿ ನಡೆಯುತ್ತಿರುವ ವಾರ್ಷಿಕ ಪೂಜಾ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ, ದ.ಕ.ಸಂಸದ ನಳಿನ್ ಕುಮಾರ್ ಕಟೀಲ್ ರವರು ತಮ್ಮ ಕುಟುಂಬ ಸದಸ್ಯರೊಂದಿಗೆ ಭಾಗಿಯಾಗಿದ್ದರು ಮತ್ತು ಇದರ ಫೋಟೋಗಳನ್ನು ತಮ್ಮ ಫೇಸ್ಬುಕ್ ಪೇಜ್ ನಲ್ಲಿ ಹಂಚಿಕೊಂಡಿದ್ದಾರೆ.

ನಳಿನ್ ಕುಮಾರ್ ಕಟೀಲ್ ಅವರು, ತಾನು ರಾಜಕೀಯವಾಗಿ ಮೂಲೆಗುಂಪಾಗುವ ಭೀತಿಯಿಂದ ಮತ್ತು ಮುಂದಿನ ದಿನಗಳಲ್ಲಿ ತನಗೆ ಉನ್ನತ ಸ್ಥಾನಮಾನಗಳು ಲಭಿಸುವಂತಾಗಬೇಕು ಎಂದು ಕುಂಜಾಡಿ ಮನೆಯಲ್ಲಿ ಗೌಪ್ಯವಾಗಿ ಹೋಮ, ಹವನಾದಿಗಳನ್ನು ನಡೆಸುತ್ತಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿಗಳು ಹರಿದಾಡುತ್ತಿದ್ದವು.


























