ಮಂಗಳೂರು : ಕುಕ್ಕರ್ ಬಾಂಬ್ ಸ್ಫೋಟಗೊಂಡು ಗಾಯಗೊಂಡಿದ್ದ ಆಟೋ ಚಾಲಕ ಪುರುಷೋತ್ತಮ್ ಪೂಜಾರಿ ರವರ ನಿವಾಸಕ್ಕೆ ಅರುಣ್ ಕುಮಾರ್ ಪುತ್ತಿಲ ರವರು ಭೇಟಿ ನೀಡಿದರು.

ಕೆಲ ಸಮಯಗಳ ಹಿಂದೆ ಮಂಗಳೂರಿನಲ್ಲಿ ಆಟೋ ರಿಕ್ಷಾದಲ್ಲಿ ಕುಕ್ಕರ್ ಬಾಂಬ್ ಸ್ಫೋಟಗೊಂಡು ಆಟೋ ಚಾಲಕ ಪುರುಷೋತ್ತಮ್ ಪೂಜಾರಿ ರವರು ಗಾಯಗೊಂಡಿದ್ದರು.
ನವೆಂಬರ್ 19. 2022 ರಂದು ಮಂಗಳೂರಿನಲ್ಲಿ ಸ್ಪೋಟಗೊಂಡ ಬಾಂಬ್ ಇಡೀ ರಾಜ್ಯವನ್ನೆ ಬೆಚ್ಚಿ ಬೀಳಿಸಿತ್ತು. ಕರ್ನಾಟಕದಲ್ಲಿ ಐಸಿಸ್ ಮಾದರಿ ಕೃತ್ಯಕ್ಕೆ ಸಂಚು ರೂಪಗೊಂಡಿದ್ದು ಈ ಸ್ಪೋಟದಿಂದ ಬಯಲಾಗಿತ್ತು. ಮಂಗಳೂರಿನಲ್ಲಿ 2020 ರಲ್ಲಿ ಬರೆಯಲ್ಪಟ್ಟಿದ್ದ ಉಗ್ರ ಗೋಡೆ ಬರಹ ಪ್ರಕರಣದ ಆರೋಪಿಯಾಗಿದ್ದ ಮಹಮ್ಮದ್ ಶಾರೀಕ್ ತಂದ ಬಾಂಬ್ ಅವನ ಕಾಲ ಬುಡದಲ್ಲೇ ಸ್ಪೋಟಗೊಂಡು ಆತ ಅಲ್ಲೇ ಸಿಕ್ಕಿ ಬಿದ್ದಿದ್ದ.

























