ಪುತ್ತೂರು : ಕಾರು ಮತ್ತು ಸ್ಕೂಟರ್ ನಡುವೆ ಅಪಘಾತ ಸಂಭವಿಸಿದ ಘಟನೆ ಕಲ್ಲರ್ಪೆ ಎಂಬಲ್ಲಿ ನಡೆದಿದೆ.

ಘಟನೆಯಲ್ಲಿ ದ್ವಿಚಕ್ರ ವಾಹನ ಸವಾರ ನೈತಾಡಿಯ ಇಸ್ಮಾಯಿಲ್ ಮೃತಪಟ್ಟಿದ್ದಾರೆಂದು ತಿಳಿದು ಬಂದಿದೆ.
ಇಸ್ಮಾಯಿಲ್ ಬೆಳಿಗ್ಗೆ ಕಲ್ಲರ್ಪೆಯಲ್ಲಿರುವ ತಮ್ಮ ಜಮೀನಿಗೆ ಹೋಗುವ ವೇಳೆ ಈ ಅಪಘಾತ ಸಂಭವಿಸಿದೆ.
ಅಪಘಾತದಲ್ಲಿ ಗಂಭೀರ ಗಾಯಗೊಂಡ ಇಸ್ಮಾಯಿಲ್ ರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕರೆದೊಯ್ಯುವ ವೇಳೆ ದಾರಿ ಮಧ್ಯೆ ಕೊನೆಯುಸಿರೆಳೆದಿದ್ದಾರೆನ್ನಲಾಗಿದೆ.
ಅಪಘಾತದ ರಭಸಕ್ಕೆ ದ್ವಿಚಕ್ರ ವಾಹನ ನಜ್ಜುಗುಜ್ಜಾಗಿದೆ.


























