ವಿಟ್ಲ : ಪುಣಚ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೋಡಂಚಡ್ಕ ಬೈರಿಕಟ್ಟೆ ಎಂಬಲ್ಲಿ ಅನ್ಯಮತೀಯ ವ್ಯಕ್ತಿಯೋರ್ವರು ಅಕ್ರಮವಾಗಿ ಕಟ್ಟಡ ಕಟ್ಟಿ ಅದರಲ್ಲಿ ಗೋ ಫಾರ್ಮ್ ಮಾಡಲು ಪ್ರಯತ್ನ ನಡೆಸುತ್ತಿದ್ದು, ಈ ಬಗ್ಗೆ ವಿರೋಧಿಸಿ ಹಿಂದೂ ಹೋರಾಟ ಸಮಿತಿಯ ನೇತೃತ್ವದಲ್ಲಿ ಪುಣಚ ಪಂಚಾಯತ್ ನ ಮುಂಭಾಗದಲ್ಲಿ ಪ್ರತಿಭಟನೆ ನಡೆಯಿತು.

ಬಿಜೆಪಿ ಆಡಳಿತವಿರುವ ಪುಣಚ ಗ್ರಾಮ ಪಂಚಾಯತ್ ನ ವ್ಯಾಪ್ತಿಯಲ್ಲಿ ಬರುವ ಕೋಡಂಚಡ್ಕ ಬೈರಿಕಟ್ಟೆ ಎಂಬಲ್ಲಿ ಅನ್ಯಮತೀಯ ವ್ಯಕ್ತಿಯೋರ್ವರು ಅಕ್ರಮವಾಗಿ ಕಟ್ಟಡ ಕಟ್ಟಿ ಅದರಲ್ಲಿ ಗೋ ಫಾರ್ಮ್ ಮಾಡಲು ಪ್ರಯತ್ನ ಮಾಡುತ್ತಿದ್ದು, ಈ ಅಕ್ರಮ ಕಟ್ಟಡವನ್ನು ಸಕ್ರಮಗೊಳಿಸಲು ಪರವಾನಿಗೆ ನೀಡಲಾಗುತ್ತಿದೆ.
ಈ ಅಕ್ರಮ ಕಟ್ಟಡಕ್ಕೆ ಪರವಾನಿಗೆ ನೀಡಲು ಸ್ಥಳೀಯ ಪ್ರಭಾವಿ ವ್ಯಕ್ತಿಯೊಬ್ಬರ ಹುನ್ನಾರವಿದ್ದು, ಈ ಅಕ್ರಮ ಕಟ್ಟಡವನ್ನು ತೆರವುಗೊಳಿಸಲು ಅವಕಾಶವಿದ್ದರೂ ಕೂಡ ಯಾವುದೇ ಕ್ರಮವನ್ನು ಪಂಚಾಯತ್ ಕೈಗೊಳ್ಳಲಿಲ್ಲ, ಇದರ ವಿರುದ್ಧ ಕ್ರಮ ಕೈಗೊಳ್ಳಬೇಕು ಹಾಗೂ ಅಕ್ರಮವಾಗಿ ಕಟ್ಟಿರುವ ಕಟ್ಟಡವನ್ನು ತೆರವುಗೊಳಿಸಬೇಕು ಎಂದು ಆಗ್ರಹಿಸಿ ಹಿಂದೂ ಹೋರಾಟ ಸಮಿತಿಯ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.

ಪ್ರತಿಭಟನೆಯಲ್ಲಿ ನೂರಾರು ಹಿಂದೂ ಕಾರ್ಯಕರ್ತರು ಹಾಗೂ ಪ್ರಮುಖರು ಉಪಸ್ಥಿತರಿದ್ದರು.

























