ಕಡಬ : ಚಿನ್ನದ ಅಂಗಡಿ ಉದ್ಘಾಟನೆಯ ಖುಷಿಯಲ್ಲಿದ್ದ ಯುವಕನೋರ್ವ ಅಪಘಾತದಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ನಡೆದಿದೆ.

ಮೃತ ಯುವಕನನ್ನು ಕಡಬ ನಿವಾಸಿ ನಾಗಪ್ರಸಾದ್ ಎಂದು ಗುರುತಿಸಲಾಗಿದೆ.
ಮರ್ದಾಳ ಮಸೀದಿ ಬಿಲ್ಡಿಂಗ್ ನಲ್ಲಿ ಜೂ.22 ರಂದು ಐಶ್ವರ್ಯ ಗೋಲ್ಡ್ ಹೆಸರಿನ ಚಿನ್ನದಂಗಡಿ ಶುಭಾರಂಭಗೊಳ್ಳಬೇಕಾಗಿತ್ತು. ಈ ಹಿನ್ನೆಲೆಯಲ್ಲಿ ಶುಭಾರಂಭಕ್ಕೆಬೇಕಾದ ತಯಾರಿಯಲ್ಲಿ ನಾಗಪ್ರಸಾದ್ ನಿರತರಾಗಿದ್ದರು. ಆದರೇ ಅಂಗಡಿ ಶುಭಾರಂಭದ ದಿನವಾದ ಇಂದು ಬೆಳಿಗ್ಗೆ ನಾಗಪ್ರಸಾದ್ ಮೃತದೇಹವು ಸಕಲೇಶಪುರ ಠಾಣಾ ವ್ಯಾಪ್ತಿಯ ಗುಂಡ್ಯ ಸಮೀಪ ಅಪಘಾತದಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಕಂಡುಬಂದಿದೆ.
ಘಟನೆಯ ಬಗ್ಗೆ ಸಾರ್ವಜನಿಕರು ಅನುಮಾನ ವ್ಯಕ್ತಪಡಿಸುತ್ತಿದ್ದು, ತನಿಖೆಯ ನಂತರವಷ್ಟೇ ಸತ್ಯಾಂಶ ತಿಳಿದು ಬರಬೇಕಿದೆ..


























