ಪುತ್ತೂರು : ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ವಿದ್ಯಾರ್ಥಿಗಳಲ್ಲಿ ಸ್ವಚ್ಛ ಪರಿಸರ ಹಾಗೂ ಪ್ರಕೃತಿಯ ಕುರಿತಾಗಿ ಜನ ಜಾಗೃತಿ ಮೂಡಿಸುವ ಜೊತೆಗೆ ವಿದ್ಯಾರ್ಥಿಗಳಲ್ಲಿರುವ ಚಿತ್ರಕಲಾ ಪ್ರತಿಭೆಯನ್ನು ಹೊರ ತರುವ ಹಾಗೂ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಭಾರತ ಸೇವಾದಳ ಪುತ್ತೂರು ತಾಲೂಕು ಸಮಿತಿ ನೇತೃತ್ವದಲ್ಲಿ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸಹಕಾರದೊಂದಿಗೆ ಶಿವಮಣಿ ಕಲಾತಂಡ (ರಿ) ಸಂಚಾಲಕತ್ವದಲ್ಲಿ ಸುದಾನ ವಸತಿಯುತ ಶಾಲೆ ಹಾಗೂ ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಸಹಕಾರದಲ್ಲಿ ಕಡಬ ಮತ್ತು ಪುತ್ತೂರು ತಾಲೂಕು ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಮಟ್ಟದ ಚಿತ್ರಕಲಾ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ.

ಈಗಾಗಲೇ ಜುಲೈ 23ರಂದು ಶಾಲಾ ಮಟ್ಟದಲ್ಲಿ ಪರಿಸರ ಕುರಿತಾಗಿ ಚಿತ್ರಕಲಾ ಸ್ಪರ್ಧೆಯನ್ನು ಏರ್ಪಡಿಸಿ ಅದರಲ್ಲಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಜುಲೈ 28ರಂದು ಸುಧಾನ ವಸತಿಯುತ ಶಾಲೆಯಲ್ಲಿ ತಾಲೂಕು ಮಟ್ಟದ ಚಿತ್ರಕಲೆ ಸ್ಪರ್ಧೆ ನಡೆಯಲಿದೆ.
ರೆ. ವಿಜಯ್ ಆರ್ ವಿ ನವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಲೋಕೇಶ್ ಎಸ್.ಆರ್ ಹಾಗೂ ದೈಹಿಕ ಶಿಕ್ಷಣ ಪರಿವೀಕ್ಷಾಕರಾದ ಸುಂದರ ಗೌಡ ಅವರು ವಿಜೇತರಿಗೆ ಬಹುಮಾನ ವಿತರಿಸಲಿದ್ದಾರೆ.
ಕ ಸಾ ಪ ಪುತ್ತೂರು ಗೌರವ ಕಾರ್ಯದರ್ಶಿಗಳಾದ ಡಾ. ಪೀಟರ್ ವಿಲ್ಸನ್ ಪ್ರಭಾಕರ್ ಅವರಿಂದ ವಿಶ್ವ ಪರಿಸರ ದಿನಾಚರಣೆ ಮಹತ್ವದ ಕುರಿತು ಉಪನ್ಯಾಸ ನಡೆಯಲಿದೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಾರತ ಸೇವಾದಳದ ಅಧ್ಯಕ್ಷರಾದ ಪುತ್ತೂರು ಉಮೇಶ್ ನಾಯಕ್ ಅವರು ವಹಿಸಲಿದ್ದಾರೆ. ಭಾರತ ಸೇವಾದಳದ ಜಿಲ್ಲಾಧ್ಯಕ್ಷರಾದ ಎಸ್ ಬಿ ಜಯರಾಮ ರೈ, ಸೇವಾದಳದ ಜಿಲ್ಲಾ ಸಂಘಟರಾದ ಮಂಜೇಗೌಡ, ಶಾಲಾ ಮುಖ್ಯ ಗುರುಗಳಾದ ಶೋಭ ನಾಗರಾಜ್, ಶಿವಮಣಿ ಕಲಾತಂಡದ ಅಧ್ಯಕ್ಷರಾದ ಸುದರ್ಶನ ಪುತ್ತೂರು, ಸಂಚಾಲಕರಾದ ಮನು ಕುಮಾರ್ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಭಾರತ್ ಸೇವಾದಳದ ಪುತ್ತೂರು ತಾಲೂಕು ಅಧ್ಯಕ್ಷರಾದ ಪುತ್ತೂರು ಉಮೇಶ್ ನಾಯಕ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

























