ಬಂಟ್ವಾಳ : ತಾಲೂಕಿನ ವೀರಕಂಭ ಗ್ರಾಮದ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಮಜಿ ವೀರಕಂಭ ಇಲ್ಲಿ ಕಳೆದ 8 ವರ್ಷಗಳಿಂದ ಮುಖ್ಯ ಶಿಕ್ಷಕರಾಗಿ ಸೇವೆ ಸಲ್ಲಿಸಿರುವ ನಾರಾಯಣ ಪೂಜಾರಿ ಎಸ್ ಕೆ ಇವರು ವಯೋನಿವೃತ್ತಿ ಹೊಂದಲಿರುವ ಕಾರಣ ಜೂ.30 ರಂದು ಶಾಲೆಯಲ್ಲಿ ಗುರುವಂದನಾ ಕಾರ್ಯಕ್ರಮ ಆಯೋಜಿಸಲಾಗಿದೆ.
ಈ ಸಂದರ್ಭದಲ್ಲಿ ತನ್ನ ಸೇವಾ ಅವಧಿಯಲ್ಲಿ ತನ್ನೊಂದಿಗೆ ವಿಶೇಷವಾಗಿ ಸಹಕರಿಸಿದವರನ್ನು ಗೌರವಿಸಲಾಗುವುದು. ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷರು ಹಾಗೂ ಸದಸ್ಯರುಗಳು,,ಮಕ್ಕಳ ಪೋಷಕರು, ಹಿರಿಯ ವಿದ್ಯಾರ್ಥಿಗಳು, ಶಾಲಾ ಅಭಿಮಾನಿಗಳು ಕಾರ್ಯಕ್ರಮದಲ್ಲಿ ಜೊತೆಗೂಡಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಎಂದು ನಿವೃತ್ತಿ ಹೊಂದಿರುವ ಮುಖ್ಯ ಶಿಕ್ಷಕ ನಾರಾಯಣ ಪೂಜಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


























