ಪುತ್ತೂರು : ಹೊಸ ಉದ್ಯಮವೊಂದರ ಉದ್ಘಾಟನಾ ಕಾರ್ಯಕ್ರಮ ಮುಗಿಸಿ ಹಿಂದಿರುಗಿ ಬರುವಾಗ ಅರುಣ್ ಕುಮಾರ್ ಪುತ್ತಿಲ ರವರು ಹೆರಿಗೆಗೆ ದಾಖಲಾಗಿದ್ದ ಗರ್ಭಿಣಿ ಮೃತಪಟ್ಟ ಮನೆಗೆ ತೆರಳಿ ಸಾಂತ್ವನ ಹೇಳಿದರು.
ಕಾರ್ಯಕ್ರಮ ಮುಗಿಸಿ ಬರುವಾಗ ರಸ್ತೆಯಲ್ಲಿ ಜನ ಸೇರಿದ್ದನ್ನು ನೋಡಿ ವಿಚಾರಿಸಿದಾಗ ಮೃತಪಟ್ಟ ಬಗ್ಗೆ ತಿಳಿದುಬಂದಿದ್ದು, ನಂತರ ಅವರ ಮನೆಗೆ ತೆರಳಿ ಸಾಂತ್ವನ ಹೇಳಿದರು.

ಶೇಖಮಲೆ ಬೊಳ್ಳಾಡಿ ಇಬ್ರಾಹಿಂ ಎಂಬವರ ಪತ್ನಿ 9 ತಿಂಗಳ ಗರ್ಭಿಣಿ ಹಸೀನಾ (29) ಮಂಗಳೂರಿನ ಎಜೆ ಆಸ್ಪತ್ರೆಗೆ ದಾಖಲಾಗಿದ್ದರು. ಜೂ.28 ರಂದು ಹೆರಿಗೆ ಸಂದರ್ಭ ಹೃದಯಾಘಾತದಿಂದ ನಿಧನರಾದರು.
ಹೆರಿಗೆಯಲ್ಲಿ ಮಗು ಜೀವಂತವಾಗಿದ್ದು, ಎಜೆ ಆಸ್ಪತ್ರೆಯ ವೈದ್ಯರಿಗೆ ಕರೆ ಮಾಡಿ ಅರುಣ್ ಪುತ್ತಿಲರು ಮಗುವಿನ ಆರೋಗ್ಯ ವಿಚಾರಿಸಿದರು.
ಈ ಹಿಂದೆಯೂ ಅಪಘಾತ ನಡೆದ ಸಂದರ್ಭ ಧರ್ಮ ನೋಡದೆ ತನ್ನದೇ ಕಾರಿನಲ್ಲಿ ರಕ್ತದ ಮಡುವಿನಲ್ಲಿದ್ದ ಗಾಯಾಳುಗಳನ್ನು ಹಾಕಿಕೊಂಡು ಹೋದ ಉದಾಹರಣೆಯೂ ಇದೆ.
ಮೊನ್ನೆಯಷ್ಟೇ ಮಂಗಳೂರಿನಿಂದ ಬರುತ್ತಿದ್ದಾಗ ರಸ್ತೆ ಬದಿಯ ಚರಂಡಿಗೆ ಬಿದ್ದಿದ್ದ ಕಾರನ್ನು ಮೇಲೆತ್ತಲು ಸಹಾಯ ಮಾಡಿದ್ದರು.
ಸತ್ಯ ವಿಚಾರವನ್ನು ತಿರುಚಿ ಬಕ್ರೀದ್ ಹಬ್ಬಕ್ಕೆ ಮುಸ್ಲಿಂ ಮನೆಗೆ ತೆರಳಿ ಶುಭಕೋರಿದರು ಎಂದು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಅನ್ನು ಹರಿಬಿಡಲಾಗುತ್ತಿದೆ.

























